ರಾಜಕಾಲುವೆ, ಚರಂಡಿ ಹೂಳೆತ್ತಲು ಶಾಸಕ ಕಾಮತ್‌ ಒತ್ತಾಯ

KannadaprabhaNewsNetwork |  
Published : Apr 13, 2025, 02:01 AM IST
ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.ಈ ವೇಳೆ ಮಾತನಾಡಿದ ಶಾಸಕ ಕಾಮತ್‌, ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮಾರ್ಚ್ ಅಂತ್ಯದ ವೇಳೆಗೆ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮಳೆಗಾಲದ ಪೂರ್ವ ಸಿದ್ಧತೆಗಳ ಕುರಿತು ಕಾರ್ಯ ಚಟುವಟಿಕೆಗಳು ಆರಂಭವಾಗುತ್ತಿದ್ದವು. ಆದರೆ ಪ್ರಸ್ತುತ ಪಾಲಿಕೆಯಲ್ಲಿ ಬಿಜೆಪಿ ಅವಧಿ ಮುಗಿದ ಪರಿಣಾಮ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಜಿಲ್ಲಾಡಳಿತ ಹಾಗೂ ಮ.ನ.ಪಾ ಅಧಿಕಾರಿಗಳ ಆಡಳಿತ ನಡೆಯುತ್ತಿದೆ. ಏಪ್ರಿಲ್ ತಿಂಗಳ ಮಧ್ಯಭಾಗಕ್ಕೆ ಬಂದರೂ ಯಾವುದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಂಡಿಲ್ಲ ಎಂದರು.

ಕೂಡಲೆ ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಜಿ ಮೇಯರ್‌ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಪೂರ್ಣಿಮಾ, ಗಣೇಶ್ ಕುಲಾಲ್, ಭರತ್ ಕುಮಾರ್, ಮನೋಹರ್ ಕದ್ರಿ, ಜಗದೀಶ್ ಶೆಟ್ಟಿ, ಸಂದೀಪ್ ಗರೋಡಿ, ಶೈಲೇಶ್ ಶೆಟ್ಟಿ, ಕಿಶೋರ್ ಕೊಟ್ಟಾರಿ, ರೇವತಿ ಶ್ಯಾಮ್ ಸುಂದರ್, ರೂಪಶ್ರೀ, ಲೀಲಾವತಿ ಪ್ರಕಾಶ್, ಜಯಶ್ರೀ ಕುಡ್ವ, ಜಯಲಕ್ಷ್ಮಿ ಶೆಟ್ಟಿ, ವೀಣಾ ಮಂಗಳ, ವನಿತಾ ಪ್ರಸಾದ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''