ದೈವಾರಾಧಕರ ನೆರವಿಗೆ ಧಾವಿಸಲು ಶಾಸಕ ಕಾಮತ್ ಅಧಿವೇಶನದಲ್ಲಿ ಆಗ್ರಹ

KannadaprabhaNewsNetwork |  
Published : Dec 13, 2025, 03:15 AM IST
32 | Kannada Prabha

ಸಾರಾಂಶ

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಮಂಗಳೂರು: ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣರ ಹೀಗೆ ವಿವಿಧ ವರ್ಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವದವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ ಅನೇಕ ವರ್ಗಗಳಿವೆ. ಸರ್ಕಾರ ಇದನ್ನು ಬಹಳ ಸೂಕ್ಷ್ಮವಾಗಿ ಅರ್ಥೈಸಿಕೊಂಡು ಆಯಾ ಹೆಸರುಗಳನ್ನೇ ಉಲ್ಲೇಖಿಸಬೇಕು ಹೊರತು ಸಾಹಿತಿಗಳು, ಕಲಾವಿದರು, ಲಲಿತ ಕಲೆ, ಶಿಲ್ಪ ಕಲೆ, ಮೊದಲಾದ ಸಾಲಿಗೆ ಸೇರಿಸಬಾರದು. 40 ವರ್ಷಕ್ಕಿಂತ ಕಡಿಮೆ ಹಾಗೂ 58 ವರ್ಷಕ್ಕಿಂತ ಮೇಲ್ಪಟ್ಟ ಅನೇಕರು ಸಹ ದೈವಾರಾಧನೆಯಲ್ಲಿ ತೊಡಗಿಕೊಂಡಿದ್ದು ಅವರಿಗೂ ಅನುಕೂಲವಾಗುವಂತಹ ಮಾನದಂಡಗಳನ್ನು ರೂಪಿಸಬೇಕು ಎಂದರು.ನಲಿಕೆ ಸಮುದಾಯದ ಕೇವಲ ಮೂರು ಜನರಿಗೆ ಮಾಶಾಸನ ನೀಡಲಾಗುತ್ತಿದೆ ಎಂದು ಸರಕಾರ ಅಧಿವೇಶನದಲ್ಲಿ ಉತ್ತರ ನೀಡಿದ್ದು, ನಮ್ಮ ಜಿಲ್ಲೆಯಲ್ಲಿ ದೈವಾರಾಧನೆ ಚಾಕರಿಯಲ್ಲಿ ತೊಡಗಿಕೊಂಡಿರುವವರ ಸಂಖ್ಯೆ ಬಹಳಷ್ಟಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಅವರಿಗೆ ಪಿಎಫ್, ಇಎಸ್ಐ, ಸೇರಿದಂತೆ ಯಾವುದೇ ಸೌಲಭ್ಯಗಳು ಇಲ್ಲವಾಗಿದ್ದು ಅವರ ಆದಾಯ ಹೆಚ್ಚುಗೊಳಿಸುವುದು, ಅವರೆಲ್ಲರಿಗೂ ಪ್ರತಿ ತಿಂಗಳು ಎರಡೂವರೆ ಸಾವಿರ ರು. ಮಾಸಾಶನ, ಬೇರೆ ರಾಜ್ಯಗಳಿಂದ ಮದುವೆಯಾಗಿ ಬಂದಾಗ ಜಾತಿ ಪ್ರಮಾಣ ಪತ್ರ ಪಡೆಯುವಲ್ಲಿ ಆಗುತ್ತಿರುವ ತಾರತಮ್ಯ ಸೇರಿದಂತೆ ಎಲ್ಲ ಸಮಸ್ಯೆ ಗಳನ್ನು ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!