ಕನ್ನಡ ಪ್ರಭ ವಾರ್ತೆ ಮದ್ದೂರು
ನಗರಸಭೆ ಆಯುಕ್ತೆ ರಾಧಿಕಾ ಸೋಮಶೇಖರ್ ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಮತ್ತು ಒಳಚರಂಡಿ ಗುಣಮಟ್ಟ ಪರಿಶೀಲಿಸಿದ ವೇಳೆ ಸಾರ್ವಜನಿಕರು ಮಳೆಯಿಂದಾಗಿ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕರಿಗೆ ದೂರಿದರು.
ನಂತರ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಶಾಸಕರು ಮುಂದಿನ ಒಂದು ವಾರದೊಳಗೆ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ ಸಮಸ್ಯೆ ಬಗೆಹರಿ, ಈ ಹಿಂದೆ ನಡೆದ ಒಳಚರಂಡಿ ಕಾಮಗಾರಿಗಳಲ್ಲಿ ಕೆಲವೊಂದು ಲೋಪದೋಷಗಳು ಇದ್ದು, ರಸ್ತೆಗಳ ಕೆಳಗೆ ಚರಂಡಿಗಳಲ್ಲಿ ನಿರ್ಮಾಣ ಮಾಡಿರುವುದರಿಂದ ಮಳೆಗಾಲದಲ್ಲಿ ಪದೇ, ಪದೇ ಸಮಸ್ಯೆಯಾಗುತ್ತಿದೆ. ಹೀಗಾಗಿ ರಸ್ತೆ ರಸ್ತೆಗಿಂತ ಎತ್ತರವಾಗಿ ಒಳಚರಂಡಿ ನಿರ್ಮಾಣ ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಂತರ ಶಾಸಕರು ಕೆಮ್ಮಣ್ಣುನಾಲೆ ಅಧುನಿಕರಣ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ನದಾಫ್, ನೀರಾವರಿ ಇಲಾಖೆಯ ನಾಗರಾಜು, ಲೋಕೋಪಯೋಗಿ ಇಲಾಖೆ ಹನುಮಂತು, ನಗರಸಭೆ ಎಇಇ ರಾಜಶೇಖರ್, ಕಂದಾಯ ಅಧಿಕಾರಿ ಪುಟ ಸ್ವಾಮಿ, ಪುರಸಭೆ ಮಾಜಿ ಸದಸ್ಯ ಎಂ.ಬಿ. ಸಚಿನ್ ಮತ್ತಿತರರು ಇದ್ದರು.