ಕನ್ನಡಪ್ರಭ ವಾರ್ತೆ ಯಳಂದೂರು
ಈ ವೇಳೆ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಇಡೀ ಕ್ಷೇತ್ರದ ಎಲ್ಲಾ ಗ್ರಾಮಗಳ, ಎಲ್ಲಾ ಜನಾಂಗಗಳ ಬೀದಿಗೂ ರಸ್ತೆ, ಚರಂಡಿ ಅಭಿವೃದ್ಧಿ ಮಾಡುವುದು ನನ್ನ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ನಾನು ಕಾರ್ಯನಿರತನಾಗಿದ್ದೇನೆ. ಕಳೆದ 2 ದಿನಗಳ ಅವಧಿಯಲ್ಲಿ 4.85 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದ್ದೇನೆ. ಹೋದಲ್ಲೆಡೆ ನನಗೆ ಇನ್ನೂ ಅನೇಕ ಕೆಲಸಗಳು ಆಗಿಲ್ಲವೆಂದು ಸಾರ್ವಜನಿಕರು ದೂರು ನೀಡುತ್ತಾರೆ. ಇದನ್ನು ನಯವಾಗಿ ಪುರಸ್ಕರಿಸಿ ಆ ಕೆಲಸಗಳನ್ನು ಪೂರ್ಣಗೊಳಿಸಲು ನಾನು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದರು.
ಮಹಿಳೆಯರೊಂದಿಗೆ ಸಂವಾದ:ಬಳಿಕ ಕಂದಹಳ್ಳಿ ಗ್ರಾಮದ ಉಪ್ಪಾರ ಜನಾಂಗದ ಬೀದಿಯಲ್ಲಿ ಮಹಿಳೆಯರ ಜೊತೆ ಶಾಸಕ ಎ.ಆರ್. ಕೃಷ್ಣಮೂರ್ತಿ ಕೆಲ ಕಾಲ ಸಂವಾದ ನಡೆಸಿದರು. ಬಿಸಿಲಿನ ಬೇಗೆಯಲ್ಲೂ ತಮಗಾಗಿ ಕಾಯುತ್ತಿದ್ದ ಮಹಿಳೆಯರ ಜೊತೆ ಉಭಯ ಕುಶಲೋಪರಿ ವಿಚಾರಿಸಿದರು.
---
ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ ನೀಡಿ ಮಹಿಳೆಯರ ಜೊತೆ ಕೆಲ ಕಾಲ ಸಂವಾದ ನಡೆಸಿದರು.