ಕನ್ನಡಪ್ರಭ ವಾರ್ತೆ ಅರಕಲಗೂಡು
ಸಭೆಯಲ್ಲಿ ಪ್ರಮುಖವಾಗಿ ಕೆಳಕಂಡ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಆರೋಗ್ಯ ಉಪಕೇಂದ್ರ ಕಟ್ಟಡಗಳ ನಿವೇಶನ ಹಸ್ತಾಂತರ: ಆರೋಗ್ಯ ಉಪಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿರುವ ನಿವೇಶನಗಳನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸದೆ ವಿಳಂಬ ಮಾಡುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರವಾಗಿ ನಿವೇಶನ ಹಸ್ತಾಂತರಿಸಿ ಕಾಮಗಾರಿಗಳಿಗೆ ಅನುವು ಮಾಡಿಕೊಡುವಂತೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ:ತಾಲೂಕಿನ ಎಲ್ಲಾ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ತುರ್ತಾಗಿ ನೀರಿನ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರಾವರಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಏತ ನೀರಾವರಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ದರಖಾಸ್ತು ಸಮಿತಿಯಲ್ಲಿರುವ ಅರ್ಜಿಗಳ ವಿಲೇವಾರಿ ಹಾಗೂ ಪ್ರಗತಿಯ ಕುರಿತು ಮಾಹಿತಿ ಪಡೆದು, ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಹಸ್ತಾಂತರಿಸುವಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸಿ, ಶೀಘ್ರವಾಗಿ ನಿವೇಶನ ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಸೂಚಿಸಿದರು.