ಹಾಲು ಕರೆಯುವ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ಮಂಜು

KannadaprabhaNewsNetwork |  
Published : Nov 27, 2026, 01:45 AM IST
26ಎಚ್ಎಸ್ಎನ್4 :  | Kannada Prabha

ಸಾರಾಂಶ

ಹೈನುಗಾರಿಕೆಯಿಂದ ಪ್ರತಿನಿತ್ಯ ಆದಾಯ ಗಳಿಸಲು ಸಾಧ್ಯವಾಗುವುದರ ಜೊತೆಗೆ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗುತ್ತದೆ. ರೈತರು ಕೃಷಿ ಮತ್ತು ಹೈನುಗಾರಿಕೆ ಎರಡನ್ನೂ ಸಮನ್ವಯಗೊಳಿಸಿಕೊಂಡು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಮನವಿ ಮಾಡಿದರು. ಇಂತಹ ಸ್ಪರ್ಧೆಗಳು ರೈತರಲ್ಲಿ ಹೈನುಗಾರಿಕೆ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಉತ್ತಮ ತಳಿಯ ಹಸುಗಳ ಸಾಕಾಣಿಕೆ ಹಾಗೂ ಹಾಲಿನ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹ ನೀಡುತ್ತವೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರಿಗೆ ಹೈನುಗಾರಿಕೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿ, ಹೈನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಪಶುಪಾಲನಾ ಇಲಾಖೆಯ ವತಿಯಿಂದ ಚೌಡೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹಾಲು ಕರೆಯುವ ಸ್ಪರ್ಧೆಗೆ ಶಾಸಕ ಎ. ಮಂಜು ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪಕಸುಬಾಗಿ ಅಳವಡಿಸಿಕೊಳ್ಳಬೇಕು. ಹೈನುಗಾರಿಕೆಯಿಂದ ಪ್ರತಿನಿತ್ಯ ಆದಾಯ ಗಳಿಸಲು ಸಾಧ್ಯವಾಗುವುದರ ಜೊತೆಗೆ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗುತ್ತದೆ. ರೈತರು ಕೃಷಿ ಮತ್ತು ಹೈನುಗಾರಿಕೆ ಎರಡನ್ನೂ ಸಮನ್ವಯಗೊಳಿಸಿಕೊಂಡು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಮನವಿ ಮಾಡಿದರು. ಇಂತಹ ಸ್ಪರ್ಧೆಗಳು ರೈತರಲ್ಲಿ ಹೈನುಗಾರಿಕೆ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಉತ್ತಮ ತಳಿಯ ಹಸುಗಳ ಸಾಕಾಣಿಕೆ ಹಾಗೂ ಹಾಲಿನ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹ ನೀಡುತ್ತವೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖಂಡರಾದ ನರಸೇಗೌಡರು, ಕೃಷ್ಣೇಗೌಡರು, ಸತೀಶ್, ಗಾಂಧಿನಗರ ದಿವಾಕರ್ ಸೇರಿದಂತೆ ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಹಾಗೂ ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ
ರೈತರಿಗೆ ಪ್ರತಿ ಟನ್‌ಗೆ ₹3,825 ರಂತೆ ಬಿಲ್ ಪಾವತಿ