ಮಲ್ಲಿಪಟ್ಟಣ ಏತ ನೀರಾವರಿ ಕಾಮಗಾರಿ ವೀಕ್ಷಿಸಿದ ಶಾಸಕ ಮಂಜು; ಕಾಮಗಾರಿ ವಿಳಂಬ ಬಗ್ಗೆ ಅಸಮಾಧಾನ

KannadaprabhaNewsNetwork |  
Published : Oct 14, 2026, 01:45 AM IST
12ಎಚ್ಎಸ್ಎನ್17 :  | Kannada Prabha

ಸಾರಾಂಶ

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ವಿಫಲವಾದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರಕಲಗೂಡು: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲಿಪಟ್ಟಣ ಹಾಗೂ ಕೊಣನೂರು ಹೋಬಳಿಗಳ ಕೆರೆಗಳನ್ನು ಏತ ನೀರಾವರಿ ಯೋಜನೆಯಡಿ ತುಂಬಿಸುವ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಶಾಸಕ ಎ. ಮಂಜು ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಈ ಯೋಜನೆಯಡಿ ಎರಡೂ ಹೋಬಳಿಗಳ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದ್ದು, ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಸ್ತುತ ಕಾಮಗಾರಿಯು ಶೇ. 80ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ತೀವ್ರ ಬರದ ಪರಿಸ್ಥಿತಿಯಿಂದ ಜನರು ಹಾಗೂ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೆರೆಗಳಿಗೆ ನೀರು ಹರಿಸುವುದು ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ಕಾಮಗಾರಿಯನ್ನು ಮತ್ತಷ್ಟು ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ವಿಫಲವಾದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರಾದ ಮಹೇಶ್ ಅವರು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದೀಪಕ್ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಮಾಧಾನ ಬದಿಗಿಟ್ಟು ಲಿಂಬಿಕಾಯಿ ಪರ ಪ್ರಚಾರ: ಕುಬೇರಪ್ಪ
ಗೊಂಬೆಗಳ ಪ್ರದರ್ಶನ ಸಂಸ್ಕೃತಿ, ಸಂಸ್ಕಾರಗಳ ಭಾವನಾತ್ಮಕ ಬೆಸುಗೆ: ಶಕುಂತಲಾ ಆನಂದ್