ಕನ್ನಡಪ್ರಭ ವಾರ್ತೆ ಅರಕಲಗೂಡು
ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮನವಿ ಸ್ವೀಕರಿಸಿದ ಅವರು, ನೌಕರರಿಗೆ ಅಗತ್ಯವಾದ ಪರಿಕರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸದಿದ್ದರೆ ಅವರಿಂದ ಸಮರ್ಪಕ ರೀತಿಯ ಕೆಲಸವನ್ನು ನಿರೀಕ್ಷಿಸುವುದಾದರೂ ಹೇಗೆ ಸಾಧ್ಯ, ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿ. ನೌಕರರ ಬೇಡಿಕೆ ಕುರಿತು ಅಧಿಕಾರಿಗಳು ಸರ್ಕಾರಕ್ಕೆ ಸಮರ್ಪಕ ವರದಿ ನೀಡಬೇಕು. ಮುಷ್ಕರದಿಂದ ರೈತರು ಮತ್ತು ಗ್ರಾಮೀಣ ಭಾಗದ ಜನರಿಗೆ ತೀವ್ರ ರೀತಿಯ ತೊಂದರೆಯಾಗುತ್ತಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ನೌಕರರ ಬೇಡಿಕೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು.
ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಜಿ.ಎಂ.ಪುನೀತ್ ನೌಕರರ ಬೇಡಿಕೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪುಟ್ಟರಾಜ್, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಉಪಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಮೋಹನ್ ನಾಯಕ್, ಖಜಾಂಚಿ ಮಾಲಾಶ್ರೀ, ಗೌರವಾಧ್ಯಕ್ಷ ಪುನೀತ ಗೌತಮ್, ಪ್ರವೀಣ್ ಕುಮಾರ್, ನಾಗರಾಜ್, ಪ್ರದೀಪ್ ಕಾಂಬಲೆ, ಧರ್ಮೇಶ್, ಗೀತಾ, ಶೋಭ ಉಪಸ್ಥಿತರಿದ್ದರು.