ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಕ್ಕೆ ಶಾಸಕ ಮಂಜುನಾಥ್‌ ಸೂಚನೆ

KannadaprabhaNewsNetwork |  
Published : Oct 09, 2023, 12:46 AM IST
 ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮಧ್ಯ ಮಾರಾಟ ನಿಷೇದಕ್ಕೇ ಕ್ರಮ ಕೈಗೊಳ್ಳಲು   ಶಾಸಕ  ಮಂಜುನಾಥ್ ಸೂಚನೆ  | Kannada Prabha

ಸಾರಾಂಶ

ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲು ಶಾಸಕ ಎಂ.ಆರ್‌. ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಲೈ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳೊಂದಿಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು

ಅಧಿಕಾರಿಗಳೊಂದಿಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ತಾಕೀತು ಕನ್ನಡಪ್ರಭ ವಾರ್ತೆ ಹನೂರು ಮಲೈ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲು ಶಾಸಕ ಎಂ.ಆರ್‌. ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳೊಂದಿಗೆ ನಡೆದ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡುತ್ತಿದ್ದೇವೆ. ಸಫಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಲೈ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನೂ ಸಂಪೂರ್ಣವಾಗಿ ನಿಷೇಧಿಸಬೇಕು. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.ತಾಳುಬೆಟ್ಟದಲ್ಲಿ ಮದ್ಯ ಕಳ್ಳ ಸಾಗಣೆ ತಡೆಗಟ್ಟುವ ದೆಸೆಯಲ್ಲಿ ಕ್ರಮಕೈಗೊಳ್ಳಬೇಕು. ಖಾಸಗಿ ವಸತಿಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಹದೇಶ್ವರ ಬೆಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಹಾಗೂ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು. ಬೆಟ್ಟದ ಸುತ್ತ ಮುತ್ತ ಶಾಲೆ ಮತ್ತು ಅಂಗನವಾಡಿಗಳಿಗೆ ಅಧಿಕಾರಿಗಳ ತಂಡವನ್ನು ರಚನೆ ಮಾಡಿ ಅಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿವೆಯ ಇಲ್ಲವೋ ಎಂಬುದನ್ನು ಗಮನವಹಿಸಬೇಕು ಎಂದು ತಿಳಿಸಿದರು. ಮದ್ಯ ಮಾರಾಟ ತಡೆಗಟ್ಟಿ. ಮದ್ಯ ಮಾರಾಟ ನಿಷೇಧ ಸೂಚನಾ ಫಲಕವನ್ನು ಅಳವಡಿಸಿ ಜನರಲ್ಲಿ ಅರಿವು ಮೂಡಿಸುವಸುವಂತೆ ರಸ್ತೆಗಳ ಅಭಿವೃದ್ಧಿ ಹಾಗೂ ರಸ್ತೆಗಳ ಅಗಲೀಕರಣ ಮಾಡಲು ಅಗತ್ಯಕ್ರಮ ವಹಿಸಲು ತಿಳಿಸಿದರು . ಬೆಟ್ಟದ ಸುತ್ತ ಮುತ್ತಲಿನ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತವಾದ ಸ್ಥಳ ಕಲ್ಪಿಸಲು ತಿಳಿಸಿದರು. ಹಂದಿಗಳ ಹಾವಳಿ ಹೆಚ್ಚಾಗಿರುವುದರಿಂದ ಹಂದಿಗಳು ಮೋರಿ ಚರಂಡಿಗಳಲ್ಲಿ ಓಡಾಡುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸದರು. ಕಾಡು ಪ್ರಾಣಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕು ಎಂದು ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಮಾದಪ್ಪನ ಭಕ್ತರಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ತಿಳಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪಕಾರ್ಯದರ್ಶಿ ಚಂದ್ರಶೇಖರ್‌, ಪೊಲೀಸ್ ಇನ್‌ಸ್ಪೆಕ್ಟರ್ ನಂಜುಂಡಸ್ವಾಮಿ, ಇ.ಓ.ಉಮೇಶ್ ,ಜಿಪಂ ಇಂಜಿನಿಯರ್ ಮಂಜು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಕಿರಣ್ ಉಪಸ್ಥಿತರಿದ್ದರು. ಹನೂರು ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರ ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರು ಮಾತನಾಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ