ಕನ್ನಡಪ್ರಭ ವಾರ್ತೆ ಪಾವಗಡ
ಅವರು ಇಲ್ಲಿನ ಸುದ್ದಿಗಾರರ ಜತೆ ಮಾತನಾಡಿ ಬೆಂಗಳೂರು ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಇಲ್ಲಿನ ನಿರುದ್ಯೋಗ ಸಮಸ್ಯೆ ಸೇರಿದಂತೆ ತಾಲೂಕಿನ ಜ್ವಲಂತ ಕುರಿತು ಸಿಎಂ ಅವರ ಗಮನಕ್ಕೆ ತರುವ ಮೂಲಕ ಮನವಿ ಮಾಡಿದರು. ಇಲ್ಲಿನ ರೈತರ ನೀರಾವರಿ ಕೊಳವೆಬಾವಿಗಳ ಅಂತರ್‌ಜಲ ಹೆಚ್ಚಿಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ವೇಗ ಹೆಚ್ಚಳ,ವಿವಿಧ ಯೋಜನೆಯ ಅನುದಾನ ಬಿಡುಗಡೆ ಸೇರಿದಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಎಂಜಿನಿಯರಿಂಗ್, ವಿವಿಧ ರೀತಿಯ ಕೌಶಲ್ಯ ತರಬೇತಿಯ ಡಿಪ್ಲಮೋ ಕೋರ್ಸ್ ಕಾಲೇಜುಗಳ ಮಂಜೂರಾತಿ ಹಾಗೂ ಇತರೆ ಬೇಡಿಕೆಗಳ ಪಟ್ಟಿ ಸಲ್ಲಿಸಿ ಮನವಿ ಮಾಡಿರುವುದಾಗಿ ಹೇಳಿದರು. ತಾಲೂಕಿನ ಜ್ವಲಂತ ಸಮಸ್ಯೆ ಕುರಿತು ಬೇಡಿಕೆ ನಿವಾರಣೆಗೆ ಸಿಎಂ ಸಿದ್ದರಾಮಯ್ಯ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದು ಪರಿಶೀಲಿಸಿ ಹಂತಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಹೇಬ್ರರವರಿಗೆ ತಾಲೂಕಿನ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.