ಬಾಗಲಕೋಟೆ: ನವನಗರದ ಸೆಕ್ಟರ್-13ರ ಸರ್ಕಾರಿ ಉರ್ದು ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನಂ.1ರಲ್ಲಿ ನೂತನವಾಗಿ ಆರಂಭಗೊಂಡ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಶಾಸಕ ಉಮೇಶ್ ಮೇಟಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು. ಶಿಕ್ಷಣವೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ಅಡಿಪಾಯ ಎಂದರು.ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಭಾರತಿ ದಾಸೋಗ, ಎಸ್‌ಡಿಎಂಸಿ ಅಧ್ಯಕ್ಷ ರಫೀಕ್ ಟಕ್ಕಳಕಿ, ಅಕ್ಬರ್ ಮುಲ್ಲಾ, ವೈ.ವೈ.ತಿಮ್ಮಾಪುರ, ಎಚ್.ಎ.ಸೌದಾಗರ, ಎನ್.ಎ.ಕಲಾದಗಿ, ಪಿ.ಬಿ.ಪಾಟೀಲ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.