ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಲಿ

KannadaprabhaNewsNetwork |  
Published : Sep 20, 2024, 01:36 AM IST
ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ಒತ್ತಾಯಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಾಮಾನ್ಯ ಜ್ಞಾನ ಇಲ್ಲದೆ ಇರುವ ಅವಿದ್ಯಾವಂತನು ಕೂಡ ಹೆಣ್ಣು ಮಕ್ಕಳ ವಿರುದ್ಧ ಅಸಭ್ಯವಾಗಿ ನಡೆದುಕೊಳ್ಳುವುದಿಲ್ಲ, ಆದರೆ  ಶಾಸಕರಾಗಿರುವ ಮುನಿರತ್ನ ಹೆಣ್ಣುಮಕ್ಕಳ ಬಗ್ಗೆ  ಅಸಭ್ಯವಾಗಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ, ನಮ್ಮ ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಅವರಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ, ಇಂತಹ ಹೆಣ್ಣುಮಕ್ಕಳ ಬಗ್ಗೆ  ಗುತ್ತಿಗೆದಾರನ ಜೊತೆ ಅವಾಚ್ಯ ಶಬ್ದಗಳಿಂದ ಕೆಟ್ಟದಾಗಿ ನಿಂದಿಸಿ ಸಂಭಾಷಣೆ ಮಾಡಿರುವುದು ಪ್ರಯೋಗಾಲಯದಲ್ಲಿ  ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಹೆಣ್ಣು ಮಕ್ಕಳ ವಿರುದ್ಧ ಕೆಟ್ಟದಾಗಿ ಮಾತನಾಡಿರುವ ಇವರ ವಿರುದ್ಧ ಪಕ್ಷತೀತವಾಗಿ ಹೋರಾಟ ಮಾಡಿ ಇವರಿಗೆ ಶಿಕ್ಷೆ ಕೊಡಿಸಬೇಕು ಎಂದರು. ಭಾರತಾಂಬೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ಬಿಜೆಪಿ ಪಕ್ಷದ ಶಾಸಕರೇ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಪಕ್ಷ  ಸೂಕ್ತ ಕ್ರಮ ಕೈಗೊಳ್ಳಬೇಕು ಒಂದೊಮ್ಮೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ.  ಇಂತಹ ನಾಚಿಕೆಗೆಟ್ಟ ನಾಯಕರಿಂದ ಬಿಜೆಪಿ ಪಕ್ಷಕ್ಕೂ ಶೋಭೆ ತರುವುದಿಲ್ಲ ಈ ನಿಟ್ಟಿನಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು  ಎಂದು ವಾಗ್ದಾಳಿ ನಡೆಸಿದರು. ಈಗಾಗಲೇ ಆಡಿಯೋವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಧ್ವನಿ ಇವರದ್ದೇ ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದೊಮ್ಮೆ ಆಡಿಯೋ ನಕಲಿಯಾಗಿದ್ದರೆ  ಪೊಲೀಸರು ಇದನ್ನು ಹರಿಬಿಟ್ಟವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಇವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಾಜು,  ಗೋವಿಂದೇಗೌಡ ಹಾಜರಿದ್ದರು.Hnr,1news,1  ಹನೂರು  ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ನರೇಂದ್ರ  ಮಾಧ್ಯಮದವರ ಜೊತೆ ಮಾತನಾಡಿದರು | Kannada Prabha

ಸಾರಾಂಶ

ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್. ನರೇಂದ್ರ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್. ನರೇಂದ್ರ ಆಗ್ರಹಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾನ್ಯ ಜ್ಞಾನ ಇಲ್ಲದೆ ಇರುವ ಅವಿದ್ಯಾವಂತನು ಕೂಡ ಹೆಣ್ಣು ಮಕ್ಕಳ ವಿರುದ್ಧ ಅಸಭ್ಯವಾಗಿ ನಡೆದುಕೊಳ್ಳುವುದಿಲ್ಲ. ಆದರೆ ಶಾಸಕರಾಗಿರುವ ಮುನಿರತ್ನ ಹೆಣ್ಣು ಮಕ್ಕಳ ಬಗ್ಗೆ ಅಸಭ್ಯವಾಗಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಭಾರತ ದೇಶದಲ್ಲಿ ಹೆಣ್ಣು ಮಕ್ಕಳಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಅವರಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಇಂತಹ ಹೆಣ್ಣುಮಕ್ಕಳ ಬಗ್ಗೆ ಗುತ್ತಿಗೆದಾರನ ಜೊತೆ ಅವಾಚ್ಯ ಶಬ್ದಗಳಿಂದ ಕೆಟ್ಟದಾಗಿ ನಿಂದಿಸಿ ಸಂಭಾಷಣೆ ಮಾಡಿರುವುದು ಪ್ರಯೋಗಾಲಯದಲ್ಲಿ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದೊಮ್ಮೆ ಆಡಿಯೋ ನಕಲಿಯಾಗಿದ್ದರೆ ಪೊಲೀಸರು ಇದನ್ನು ಹರಿಬಿಟ್ಟವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭಾರತಾಂಬೆಯ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ಬಿಜೆಪಿ ಶಾಸಕರೇ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಇಂತಹ ನಾಚಿಕೆಗೆಟ್ಟ ನಾಯಕರಿಂದ ಬಿಜೆಪಿಗೆ ಶೋಭೆ ತರುವುದಿಲ್ಲ. ಈ ನಿಟ್ಟಿನಲ್ಲಿ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಾಜು, ಗೋವಿಂದೇಗೌಡ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ