ಪೋಲಿಯೊ ಲಸಿಕೆಗೆ ಶಾಸಕ ನಾಡಗೌಡ ಚಾಲನೆ

KannadaprabhaNewsNetwork | Published : Mar 4, 2024 1:15 AM

ಸಾರಾಂಶ

ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್ ನಾಡಗೌಡ (ಅಪ್ಪಾಜಿ)ಅವರು ಮಗುವಿಗೆ ಪಲ್ಸ್ ಪೋಲಿಯೊ ಹನಿ ಹಾಕವು ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ನಾಡಗೌಡ, ಜಿಲ್ಲೆಯಾದ್ಯಂತ ಮಾ.3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ದೇಶವನ್ನಾಗಿ ನಿರ್ಮಿಸಲು ಸಹಕರಿಸಬೇಕು ಎಂದರು.

ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್ ನಾಡಗೌಡ (ಅಪ್ಪಾಜಿ)ಅವರು ಮಗುವಿಗೆ ಪಲ್ಸ್ ಪೋಲಿಯೊ ಹನಿ ಹಾಕವು ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ನಾಡಗೌಡ, ಜಿಲ್ಲೆಯಾದ್ಯಂತ ಮಾ.3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ದೇಶವನ್ನಾಗಿ ನಿರ್ಮಿಸಲು ಸಹಕರಿಸಬೇಕು ಎಂದರು.ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ್ ತಿವಾರಿ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ಒಟ್ಟು 207 ತಂಡಗಳನ್ನು ರಚಿಸಲಾಗಿದೆ. ಮೇಲ್ವಿಚಾರಣೆಗಾಗಿ 44 ಜನ ಮೇಲ್ವಿಚಾರಕರನ್ನು ನೇಮಿಸಿದೆ. ತಾಲೂಕಿನಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೊ ಹನಿ ಹಾಕಿಸಿದ್ದರೂ ಮತ್ತೆ ಪೋಲಿಯೊ ಲಸಿಕೆ ಹಾಕಿಸಲು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ 38,618 ಮಕ್ಕಳನ್ನು ಗುರುತಿಸಲಾಗಿದೆ ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ಮಾತನಾಡಿದರು. ವೈದ್ಯಾಧಿಕಾರಿಗಳಾದ ಡಾ.ಸಂಗಮೇಶ್ ದಶವಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಎಸ್.ಡಿ.ಕುಂಬಾರ, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ್ ಬಿರಾದಾರ, ತಾಪಂಯ ಖುಬಾಸಿಂಗ್ ಜಾದವ್, ಜೆಓಸಿಸಿ ಬ್ಯಾಂಕ್ ನಿರ್ದೇಶಕ ಆನಂದಗೌಡ ಬಿರಾದಾರ, ಪುರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ಮಾಂತೇಶ್ ಕಟ್ಟಿಮನಿ, ಜಾವಿದ ನಾಯ್ಕೋಡಿ, ಆರೋಗ್ಯ ಇಲಾಖೆಯ ಎ.ಎಸ್.ತೇರದಾಳ, ಐಸಿ ಮಾನಕರ್ ಪ್ರಶಿಭಾರಾಣಿ. ಎಸ್ಎಸ್ ಮಾಗಿ.ಎಸ್ ಎಸ್ ಸಜ್ಜನ್, ಇಸ್ಮಾಯಿಲ್ ವಾಲಿಕಾರ್, ಪುರಸಭೆ ಸಿಬ್ಬಂದಿ ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು.

Share this article