ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ನರೇಂದ್ರಸ್ವಾಮಿ ದಿಢೀರ್ ಭೇಟಿ

KannadaprabhaNewsNetwork |  
Published : Sep 02, 2025, 01:00 AM IST
1ಕೆಎಂಎನ್ ಡಿ13 | Kannada Prabha

ಸಾರಾಂಶ

ಮಳವಳ್ಳಿ ತಾಲೂಕಿನ ಚನ್ನಪಿಳ್ಳೆಕೊಪ್ಪಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ರಾತ್ರಿ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಮೊದಲಿಗೆ ವಸತಿ ನಿಲಯದ ಬಾಲಕರ ಕಟ್ಟಡಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನ ಚನ್ನಪಿಳ್ಳೆಕೊಪ್ಪಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ರಾತ್ರಿ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು.

ಮೊದಲಿಗೆ ವಸತಿ ನಿಲಯದ ಬಾಲಕರ ಕಟ್ಟಡಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು. ನಂತರ ಬಾಲಕಿಯರ ವಸತಿ ಕಟ್ಟಡ, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ವಿದ್ಯುತ್ ದೀಪಗಳ ಕುರಿತು ಮಾಹಿತಿ ಪಡೆದುಕೊಂಡು ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು ಎಂದರು.

ಈ ಸಂದರ್ಭದಲ್ಲಿ ಹಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳಗಿನ ತಿಂಡಿ ವ್ಯವಸ್ಥೆ ಉತ್ತಮ ಪಡಿಸುವುದು, ಶೌಚಾಲಯ ಸ್ವಚ್ಛತೆ, ವಿದ್ಯುತ್ ಸೇರಿದಂತೆ ಕೆಲ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. ಅಲ್ಲದೇ ಮುಂದಿನ ಬಾರಿ ಭೇಟಿ ನೀಡುವ ವೇಳೆ ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಸಮಸ್ಯೆಗಳ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ನಿರ್ಮಿಸಿದ ಕಟ್ಟಡದ ದುರಸ್ತಿ ಕಾರ್ಯವು ತ್ವರಿತಗತಿಯಲ್ಲಿ ನಡೆಯಬೇಕು. ಶಾಲೆ ವಿದ್ಯಾರ್ಥಿಗಳಿಗೆ ಪ್ರತಿ ನಿತ್ಯದ ಊಟ ಹೊರತು ಪಡಿಸಿ ಬೇರೆ ಹಲವು ರೀತಿಯ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು, ಸದ್ಯದಲ್ಲಿಯೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸೂಚಿಸಿದರು.

ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳ ಮಕ್ಕಳು ಇದ್ದಾರೆ. ಅವರಿಗೆ ಯಾವುದೇ ಸೌಲಭ್ಯಗಳ ಕೊರತೆ ಕಾಡದಂತೆ ನೋಡಿಕೊಳ್ಳಬೇಕು. ವಾರ್ಡನ್ ಶಾಲೆಯಲ್ಲಿ ಉಳಿದುಕೊಳ್ಳುತ್ತಿಲ್ಲ ಎಂಬ ದೂರುಗಳಿವೆ. ಕೂಡಲೇ ಈ ಬಗ್ಗೆ ಗಮನ ಹರಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಾರ್ಡನ್ ಶಾಲೆಯಲ್ಲಿಯೇ ಇರುವಂತೆ ವ್ಯವಸ್ಥೆ ಮಾಡಬೇಕು ಸೂಚಿಸಿದರು.

ಈ ವೇಳೆ ಜಿಲ್ಲಾ ಕೆಡಿಪಿ ಸದಸ್ಯ ಶಶಿರಾಜ್, ಸಿಪಿಐ ಬಿ.ಎಸ್.ಶ್ರೀಧರ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶಿಕ್ಷಕಿಯರು ಇದ್ದರು.

PREV

Recommended Stories

ನ.14ರಿಂದ 20ರಿಂದ ರಾಜ್ಯದಲ್ಲಿ ಸಹಕಾರ ಸಪ್ತಾಹ
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ