ಶಾಸಕ ಪಠಾಣ ವಿವಾದಾತ್ಮಕ ಹೇಳಿಕೆಗೆ ಖಂಡನೆ, ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Jul 02, 2026, 02:15 AM IST
ಸವಣೂರು ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ತಹಸೀಲ್ದಾರ್‌ ರವಿ ಕೊರವರ ಅವರ ಮೂಲಕ ರಾಜ್ಯಪಾಲರು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕ ಯಾಸಿರ ಅಹ್ಮದ ಖಾನ್ ಪಠಾಣ ಅವರು ಪದವಿ ಕಾಲೇಜಿನಲ್ಲಿ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ, ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ತಾಲೂಕು ಬಿಜೆಪಿ ಮಂಡಳ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಸವಣೂರು: ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕ ಯಾಸಿರ ಅಹ್ಮದ ಖಾನ್ ಪಠಾಣ ಅವರು ಪದವಿ ಕಾಲೇಜಿನಲ್ಲಿ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ, ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ತಾಲೂಕು ಬಿಜೆಪಿ ಮಂಡಳ ವತಿಯಿಂದ ತಹಸೀಲ್ದಾರ್‌ ರವಿ ಕೊರವರ ಮೂಲಕ ರಾಜ್ಯಪಾಲರಿಗೆ ಹಾಗೂ ಗೃಹ ಮಂತ್ರಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದ ಎದುರಿಗೆ ಸಾಂಕೇತಿಕ ಪ್ರತಿಭಟನೆ ಕೈಗೊಂಡು, ಶಾಸಕರ ವಿರುದ್ಧ ಘೋಷಣೆ ಕೂಗಿ, ಬಳಿಕ ಮಾತನಾಡಿ, ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕ ಯಾಸಿರ ಅಹ್ಮದಖಾನ್ ಪಠಾಣ ಅವರು ಸಾರ್ವಜನಿಕವಾಗಿ ''ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಅಲ್ಲ " ಎಂಬ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದ ಭದ್ರತೆ, ರಾಷ್ಟ್ರೀಯ ಹಿತಾಸಕ್ತಿ ಹಾಗೂ ಸಾರ್ವಜನಿಕ ಶಾಂತಿ ಕದಡುವ ದೃಷ್ಟಿಯಿಂದ ಇದು ಅಪಾಯಕಾರಿ ಹೇಳಿಕೆ. ದೇಶ ಕಾಯುವ ಯೋಧರಿಗೆ ಮತ್ತು ರಾಷ್ಟ್ರಕ್ಕೆ ಮಾಡಿದ ದೊಡ್ಡ ಅಪಮಾನವಾಗಿದೆ. ಆದ್ದರಿಂದ ಬಹಿರಂಗವಾಗಿ ಕ್ಷಮೆ ಯಾಚಿಸಿ, ಹೇಳಿಕೆ ವಾಪಸ್‌ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮಂಡಳ ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ, ಬಸನಗೌಡ ಕೊಪ್ಪದ, ಬಸನಗೌಡ ಪಾಟೀಲ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಂಗಾಧರ ಬಾಣದ, ಹೊನ್ನಪ್ಪ ಕೊಳವರ, ಶ್ರೀನಿವಾಸ ಗಿತ್ತೆ, ಶ್ರೀಕಾಂತ ಲಕ್ಷ್ಮೇಶ್ವರ, ಹನುಮಂತಗೌಡ ಮುದಿಗೌಡ್ರ, ಪ್ರವೀಣ ಬಾಲೆಹೊಸೂರ, ಬಸವರಾಜ ಶಿಗ್ಗಾಂವಿ, ಸದಾನಂದ ಕೆಮ್ಮಣಕೇರಿ, ಗಜಾನನ ರಾಶಿನಕರ, ಚಿದಾನಂದ ಬಡಿಗೇರ, ಸಮೀತ ಕೆಮ್ಮಣಕೇರಿ, ನಾಗಪ್ಪ ವಾಲ್ಮೀಕಿ, ಹನುಮಂತಪ್ಪ ಲಮಾಣಿ, ಕಾಂತೇಶ ವಾಲ್ಮೀಕಿ, ಪ್ರಕಾಶಗೌಡ ಮುದಿಗೌಡ್ರ, ಮಹೇಶ ಮುದಗಲ್ಲ, ಸುರೇಶ ಕುರವತ್ತಿ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಲಿನ್ಯ ನಿಯಂತ್ರಣ ಇಲಾಖೆ ಕಣ್ಣಿದ್ದೂ ಕುರುಡು
ವಾರದೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಲು ಆದೇಶ: ಎನ್.ಕೆ. ಭಟ್ಟ