ನಾಣಚ್ಚಿ, ಕೊಡಂಗೆ, ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ

KannadaprabhaNewsNetwork | Published : Jan 13, 2025 12:45 AM

ಸಾರಾಂಶ

ನಾಣಚ್ಚಿ ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭ ಹಾಡಿಯ ಜನರು ತಮ್ಮ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ನಾಣಚ್ಚಿ, ಕೊಡಂಗೆ ಹಾಗೂ ನಾಣ್ಣಚ್ಚಿ ಗದ್ದೆ ಹಾಡಿಗೆ ಶನಿವಾರ ಸಂಜೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಭೇಟಿ ನೀಡಿ, ಹಾಡಿ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಹಾಡಿಯ ಜನರು, ಶಾಸಕರಲ್ಲಿ ತಮ್ಮ ಮೂಲಭೂತ ಸಮಸ್ಯೆಗಳ ಬಗ್ಗೆ ಹಾಗೂ ಕುಂದು-ಕೊರತೆಗಳ ಬಗ್ಗೆ ಮತ್ತು ತಮ್ಮ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಹಾಡಿಯ ಜನರ ಮನವಿಗಳನ್ನು ಆಲಿಸಿದ ಶಾಸಕ, ಅವರ ಸಮಸ್ಯೆಗಳಿಗೆ ಆದಷ್ಟು ಬೇಗ ಎಲ್ಲ ರೀತಿಯ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಕೆ. ಬಾಡಗ, ವಲಯ ಕಾಂಗ್ರೆಸ್ ಅಧ್ಯಕ್ಷ ಚಿಮ್ಮಣಮಾಡ ರವಿ, ಕಾಂಗ್ರೆಸ್ ಮುಖಂಡರು, ಹಾಡಿ ನಿವಾಸಿಗಳು ಇದ್ದರು.

------------------------------

ಗಾಯಾಳು ಕಾರ್ಮಿಕನ ಶಾಸಕ ಪೊನ್ನಣ್ಣ ಭೇಟಿ

ಶ್ರೀಮಂಗಲ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶ ಎಂಬ ಕಾರ್ಮಿಕ ಇತ್ತೀಚೆಗೆ ಕೆಲಸ ಮಾಡುತ್ತಿರುವಾಗ ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಬಳಿಕ ಮನೆಯಲ್ಲೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವಿಷಯ ತಿಳಿದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ಶನಿವಾರ ಅವರ ಮನೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ವೈದ್ಯರನ್ನು ಸಂಪರ್ಕಿಸಿದ ಶಾಸಕರು, ಅಗತ್ಯವಿದ್ದಲ್ಲಿ ಆಂಬುಲೆನ್ಸ್ ಮೂಲಕ ಸಂತ್ರಸ್ತನನ್ನು ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು. ಹೆಚ್ಚಿನ ಚಿಕಿತ್ಸೆಗೆ ಸಾಧ್ಯವಾದ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕೆ. ಬಾಡಗ ವಲಯ ಕಾಂಗ್ರೆಸ್ ಅಧ್ಯಕ್ಷ ಚಿಮ್ಮಣಮಾಡ ರವಿ ಮತ್ತಿತರರಿದ್ದರು.

Share this article