₹3 ಕೋಟಿ ವೆಚ್ಚದಲ್ಲಿ ಕಟ್ಟಿದ ಜಿಲ್ಲಾ ಕೇಂದ್ರ ಗ್ರಂಥಾಲಯ ಉದ್ಘಾಟನೆ

KannadaprabhaNewsNetwork |  
Published : Jul 01, 2026, 01:45 AM IST
29ಸಿಎಚ್ಎನ್‌53ಚಾಮರಾಜನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಕೇಂದ್ರದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು. | Kannada Prabha

ಸಾರಾಂಶ

3 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು.

ಶಾಸಕ ಸಿ. ಪುಟ್ಟರಂಗಶೆಟ್ಟರಿಂದ ಲೋಕಾರ್ಪಣೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

3 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು.

ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದಲ್ಲಿರುವ ದಿನಪತ್ರಿಕೆ ಓದುವ ಕೊಠಡಿ, ಗ್ರಂಥಾಲಯದಲ್ಲಿರುವ ಪುಸ್ತಕ ಭಂಡಾರ, ಕಟ್ಟಡದ ಮೊದಲ ಮಹಡಿಗೆ ಹೋಗುವ ಲಿಫ್ಟ್ ಹಾಗೂ ಸಭಾಂಗಣ ವೀಕ್ಷಿಸಿದರು.ಬಳಿಕ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಪುಸ್ತಕ ಪ್ರೇಮಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ಗ್ರಂಥಾಲಯವನ್ನು ಓದುಗರಿಗೆ ಮುಕ್ತಗೊಳಿಸಲಾಗಿದೆ. ಗ್ರಂಥಾಲಯ ಇಲಾಖೆಯಿಂದ 1 ಕೋಟಿ ಹಾಗೂ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ 2 ಕೋಟಿ ವಿಶೇಷ ಅನುದಾನ (ಶೇ.6) ಸೇರಿದಂತೆ ಒಟ್ಟು 3 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ನೂತನ ಗ್ರಂಥಾಲಯ ಕಟ್ಟಡದಲ್ಲಿ 6080 ಪುಸ್ತಕಗಳ ಸಂಗ್ರಹವಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪುಸ್ತಕಪ್ರೇಮಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗುವಂತೆ ನಗರದ ಹೃದಯಭಾಗದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಸುತ್ತುಗೋಡೆ, ಇತರೆ ಮೂಲಸೌಲಭ್ಯ ಕಾಮಗಾರಿಗಳಿಗಾಗಿ ಹೆಚ್ಚುವರಿ ಅನುದಾನ ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಸಿಎಸ್‌ಆರ್‌ ಅನುದಾನ ಹಾಗೂ ಎಂಎಸ್‌ಐಎಲ್‌ನಿಂದ ಅವಶ್ಯ ಅನುದಾನ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಓ ಮೋನಾ ರೋತ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್‌ ಅಸ್ಗರ್‌ ಮುನ್ನಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಶಿವಸ್ವಾಮಿ, ಕ್ಷೇತ್ರ ಶಿಕ್ಷಣಧಿಕಾರಿ ಹನುಮಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.-

29ಸಿಎಚ್ಎನ್‌53

ಚಾಮರಾಜನಗರದ ನೂತನ ಗ್ರಂಥಾಲಯವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ಈ ವೇಳೆ ಜಿಲ್ಲಾಧಿಕಾರಿ ಶ್ರೀರೂಪಾ ಸೇರಿ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಪರ್ಧಾತ್ಮಕ ಪರೀಕ್ಷೆಗೆ ಪಿಯುಸಿಯಿಂದಲೇ ಅಣಿಯಾಗಿ
ಪಾವಗಡದಲ್ಲಿ ಕಾಯಂ ಶಿಕ್ಷಕರ ಕೊರತೆ