ಜನಪ್ರತಿನಿಧಿಗಳು, ತಾಲೂಕು ಆಡಳಿತಾಧಿಕಾರಿಗಳಿಂದ ಅಭಿನಂದನೆ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ರಮೇಶ ಬಂಡಿಸಿದ್ದೇಗೌಡರನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ವತಿಯಿಂದ ಅಭಿನಂದಿಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಹಸೀಲ್ದಾರ್ ಪರಶುರಾಮು ಸತ್ತಿಗೇರಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಶಾಸಕರನ್ನು ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದಿಸಿದರು.ಪುರಸಭಾ ಸದಸ್ಯ ಎಂ.ಎಲ್. ದಿನೇಶ್ ನೇತೃತ್ವದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಸೇರಿ ಇತರ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.
ಶಾಸಕ ರಮೇಶ ಬಂಡಿಸಿದ್ದೇಗೌಡರ ಸರಳತೆ ಮೆಚ್ಚಿ ಮೂರು ಬಾರಿ ಗೆಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೂ ಸರ್ಕಾರ ಅವರನ್ನು ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರಿಂದ ಈ ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಮಹತ್ವ ನೀಡಲಿದೆ ಎಂದು ಹೇಳಿದರು.
--------------
27ಕೆಎಂಎನ್ ಡಿ34ಶ್ರೀರಂಗಪಟ್ಟಣ ಪ್ರವಾಸಿ ಮಂದಿರದಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡರನ್ನು ತಾಲೂಕು ಆಡಳಿತ ವತಿಯಿಂದ ಅಭಿನಂದಿಸಲಾಯಿತು.