ಮೃತ ವಿದ್ಯಾರ್ಥಿ ಕುಟುಂಬಕ್ಕೆ ಶಾಸಕ ರಾಯರಡ್ಡಿ ಸಾಂತ್ವನ, ಪರಿಹಾರ ವಿತರಣೆ

KannadaprabhaNewsNetwork |  
Published : Dec 22, 2024, 01:32 AM IST
೨೧ವೈಎಲ್‌ಬಿ೧:ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದಲ್ಲಿ ಮೃತ ವಿದ್ಯಾರ್ಥಿ ನಿರುಪಾಧಿ ಮನೆಗೆ ಶುಕ್ರವಾರ ಸಂಜೆ ಸಿಎಂ ಆರ್ಥಿಕ ಸಲಹೆಗಾರ,ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಪರಿಹಾರ ಮೊತ್ತವನ್ನು ವಿತರಿಸಿದರು. | Kannada Prabha

ಸಾರಾಂಶ

ತಾಲೂಕಿನ ಗಾಣದಾಳ ಗ್ರಾಮದ ಮೃತ ವಿದ್ಯಾರ್ಥಿ ನಿರುಪಾದಿ ಮನೆಗೆ ಶುಕ್ರವಾರ ಸಂಜೆ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ತಾಲೂಕಿನ ಗಾಣದಾಳ ಗ್ರಾಮದ ಮೃತ ವಿದ್ಯಾರ್ಥಿ ನಿರುಪಾದಿ ಮನೆಗೆ ಶುಕ್ರವಾರ ಸಂಜೆ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ₹8.50 ಲಕ್ಷ ಪರಿಹಾರವನ್ನು ವಿತರಿಸಿದರು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ಹೋದ ಸಂದರ್ಭ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನ್ನಿಪ್ಪಿದ ಘಟನೆ ಇತ್ತೀಚೆಗೆ ಸಂಭವಿಸಿತ್ತು.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಆರ್ಥಿಕ ಪರಿಹಾರದ ನಿಧಿಯಿಂದ ₹೨ ಲಕ್ಷ, ಸಮಾಜ ಕಲ್ಯಾಣ ಇಲಾಖೆಯಿಂದ ₹೫ ಲಕ್ಷ, ಶಿಕ್ಷಣ ಇಲಾಖೆಯಿಂದ ₹1.50 ೫೦ ಲಕ್ಷ ಪರಿಹಾರ ನೀಡಲಾಯಿತು. ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಗ್ರಾಮ ಪಂಚಾಯಿತಿ ಕಾಯಾಲಯದಲ್ಲಿ ಕೆಲಸ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಬಸವರಾಜ ರಾಯರಡ್ಡಿ ಸೂಚಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ಸಿಪಿಐ ಮೌನೇಶ ಮಾಲಿಪಾಟೀಲ, ಸಮಾಜ ಕಲ್ಯಾಣ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಇದ್ದರು. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಹಾಲಪ್ಪ:

ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಮೃತ ವಿದ್ಯಾರ್ಥಿ ಮನೆಗೆ ಮಾಜಿ ಸಚಿವ ಹಾಲಪ್ಪ ಆಚಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಮೂಲಕ ವೈಯಕ್ತಿಕವಾಗಿ ಪರಿಹಾರ ವಿತರಣೆ ಮಾಡಿದರು.ಈ ಸಂದರ್ಭ ವೀರಣ್ಣ ಹುಬ್ಬಳ್ಳಿ, ಶಂಕ್ರಪ್ಪ ಸುರಪೂರ, ಕೆ.ಅಯ್ಯನಗೌಡ, ಗಾಳೆಪ್ಪ ಓಜನಹಳ್ಳಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ