ಸಿದ್ದಾಪುರ: ವಿರಾಜಪೇಟೆ ಶಾಸಕ ಎ ಎಸ್ ಪೊನ್ಮಣ್ಣನವರ ಹುಟ್ಟು ಹಬ್ಬದ ಪ್ರಯುಕ್ತ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್ ಬಿ ಪ್ರತೀಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಶಾಸಕರಿಗೆ ಶುಭ ಹಾರೈಸಿದರು.
ಈ ಸಂದರ್ಭ ಗ್ರಾ. ಪಂ. ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಗ್ರಾ.ಪಂ ಸದಸ್ಯರು ಪಕ್ಷದ ಪ್ರಮುಖರಾದ ಎಂ ಎಸ್ ವೆಂಕಟೇಶ್, ಎಂ ಬಿಜೋಯ್, ಬಶೀರ್, ಮಜೀದ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.----------------------------------
ನಾಳೆ ಸಾಮ್ರಾಟ್ ಅಶೋಕ ನಾಟಕ ಪ್ರದರ್ಶನಕನ್ನಡಪ್ರಭ ವಾರ್ತೆ ಮಡಿಕೇರಿಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾಮ್ರಾಟ್ ಅಶೋಕ ಚಕ್ರವರ್ತಿ ಜೀವನ ಆಧಾರಿತ ಮಹಾನಾಯಕ ಸಾಮ್ರಾಟ್ ಅಶೋಕ ನಾಟಕ ಜು.13ರಂದು ಬೆಂಗಳೂರಿನಲ್ಲಿ ಪ್ರದರ್ಶನವಾಗಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ರಾಜಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಮಧ್ಯಾಹ್ನ 12ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಟಕವನ್ನು ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಡಾ.ಶರಣಪ್ರಕಾಶ ಪಾಟೀಲ, ಆರ್.ಬಿ.ತಿಮ್ಮಾಪೂರ, ಈಶ್ವರ ಖಂಡ್ರೆ, ಸಂತೋಷ್ ಲಾಡ್, ಜಮೀರ್ ಅಹಮದ್ ಖಾನ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ನಾಟಕವನ್ನು ನಾಗಪುರದ ಅಶೋಕ ಜಾಂಬುಲ್ಕರ್ ನಿರ್ದೇಶಿಸಿದ್ದು, ಎ.ವಂದನಾ ಜಾಂಬುಲ್ಕರ್ ಅವರ ನಿರ್ಮಾಣವಿದೆ. 150ಕ್ಕೂ ಹೆಚ್ಚು ಕಲಾವಿದರು ತಮ್ಮ ನಟನಾ ನೈಪುಣ್ಯತೆಯನ್ನು ಪ್ರದರ್ಶಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಎಂ.ಎನ್.ರಾಜಪ್ಪ ಮಾತನಾಡಿ, ಅಂದಿನ ನಾಟಕ ಪ್ರದರ್ಶನ ವೀಕ್ಷಿಸಲು ಜಿಲ್ಲೆಯಿಂದ 100 ಕ್ಕೂ ಅಧಿಕ ಜನ ತೆರಳಿದ್ದಾರೆ ಎಂದು ಮಾಹಿತಿ ನೀಡಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಇ.ಪೊನ್ನಪ್ಪ, ಸಂಚಾಲಕರಾದ ಎನ್.ಆರ್.ದೇವರಾಜು, ಸದಸ್ಯರಾದ ಎನ್.ಸಿ.ಗೋವಿಂದರಾಜು, ಡಿ.ಬಿ.ಕೇಶವ್ ಸುದ್ದಿಗೋಷ್ಠಿಯಲ್ಲಿದ್ದರು.