ಚನ್ನಪಟ್ಟಣ: ತಾಲೂಕಿನ ಜನತೆಯ ಆಶೀರ್ವಾದಿಂದ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗಿದ್ದು, ಶಾಸಕನಾದವನು ಸಾರ್ವಜನಿಕರಿಗೆ ಸಿಗಬೇಕು. ಈ ಹಿನ್ನೆಲೆಯಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಲು, ಅವರ ಅಹವಾಲುಗಳಿಗೆ ಸ್ಪಂದಿಸಲು ಶಾಸಕರ ಕಚೇರಿ ತೆರೆಯಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಶೇಷ ಅನುದಾನ ನೀಡಿದ್ದಾರೆ. ಅದನ್ನು ಸದ್ಬಳಸಿಕೊಂಡು ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬೋರ್‌ವೆಲ್ ರಂಗನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾ ಪ್ರಮೋದ್, ಸುನೀಲ್ ಇತರರಿದ್ದರು.ಪೊಟೋ೨೯ಸಿಪಿಟಿ೨:
ಚನ್ನಪಟ್ಟಣ ತಾಪಂ ಕಚೇರಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಯೋಗೇಶ್ವರ್ ಪೂಜೆ ಸಲ್ಲಿಸಿದರು.ಪೊಟೋ೨೯ಸಿಪಿಟಿ೩:
ಶಾಸಕರ ಕಚೇರಿಯಲ್ಲಿ ಕುಳಿತಿರುವ ಯೋಗೇಶ್ವರ್.