ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ಚಾಲನೆ

KannadaprabhaNewsNetwork |  
Published : Nov 06, 2025, 01:15 AM IST
ಗುಬ್ಬಿ ತಾಲ್ಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ನಡೆದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಎಸ್ ಆರ್ ಶ್ರೀನಿವಾಸ್. | Kannada Prabha

ಸಾರಾಂಶ

ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ಚಾಲನೆ

ಕನ್ನಡಪ್ರಭ ವಾರ್ತೆ ಗುಬ್ಬಿ

ಕ್ರೀಡಾಕ್ಷೇತ್ರವು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಜೊತೆಗೆ ವಿದ್ಯಾರ್ಥಿಗಳು ಶಿಸ್ತು ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ನಡೆದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರುಕ್ರೀಡಾ ಕ್ಷೇತ್ರವು ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಇಚ್ಛಾ ಶಕ್ತಿ, ಏಕಾಗ್ರತೆ, ಶಿಸ್ತು , ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ನಿರಂತರ ಕಠಿಣ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಸೋಲು ಕೊನೆಯಲ್ಲ ಸೋಲೇ ಗೆಲುವಿನ ಮೆಟ್ಟಿಲು, ಕ್ರೀಡಾ ಕ್ಷೇತ್ರದಲ್ಲಿ ಪರಿಣಿತರಾದವರಿಗೆ ಶೈಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೂ ಉಜ್ವಲ ಭವಿಷ್ಯವಿದೆ ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಬೇಕೆಂದು ತಿಳಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅತ್ಯಗತ್ಯ. ಕ್ರೀಡೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಪೂರ್ಣಿಮಾ ಶಿವಕುಮಾರ್, ಪ್ರಾಂಶುಪಾಲ ಡಾ ಸದಾಶಿವ, ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್, ಪಾಲಾಕ್ಷ ಆರ್ ಹಾಗಲವಾಡಿ, ಬಿ ಸಿ ಶಿವಣ್ಣ, ಹಸಿರು ಸೇನೆ ಅಧ್ಯಕ್ಷ ನಟರಾಜ್, ಸೇರಿದಂತೆ ಶಿಕ್ಷಕರು ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ