ಶಾಸಕರ ಫೋಟೋ ಬಳಸಿ..ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕರ ಭೇಟಿ

KannadaprabhaNewsNetwork |  
Published : Jan 29, 2024, 01:32 AM IST
ಪೋಟೋ 1 : ದಾಬಸ್‌ಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಎನ್.ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಈ ಬಸ್ ನಿಲ್ದಾಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಾಣ ಹಾಗೂ ಕಟ್ಟಡದ ದುರಸ್ಥಿಯನ್ನು ನನ್ನ ಗಮನಕ್ಕೆ ಬಾರದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ .

ಅವೈಜ್ಞಾನಿಕ ಕಾಮಗಾರಿಗೆ ಕಂಡು ಗರಂ । ಕಾಮಗಾರಿ ನಿಲ್ಲಿಸುವಂತೆ ತಾಕೀತು

ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುತ್ತಿಗೆದಾರರು ಅವೈಜ್ಞಾನಿಕವಾಗಿ ಕಾಮಗಾರಿ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಎಂಬ ಜನರ ದೂರಿನ ಹಿನ್ನೆಲೆ ಶಾಸಕ ಎನ್.ಶ್ರೀನಿವಾಸ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಗಳ ವಿರುದ್ಧ ಗರಂ ಆದರು.

ದಾಬಸ್‌ಪೇಟೆ ಪಟ್ಟಣಕ್ಕೆ ಸುಸಜ್ಜಿತ ಬಸ್ ನಿಲ್ದಾಣದ ಅವಶ್ಯಕತೆಯಿದ್ದು, ನಾನು ಈಗಾಗಲೇ ಸಾರಿಗೆ ಸಚಿವರೊಂದಿಗೆ ಮಾತನಾಡಿ ದಾಬಸ್‌ಪೇಟೆ ಹಾಗೂ ಸೋಲೂರು ಬಸ್ ನಿಲ್ದಾಣದ ಉನ್ನತೀಕರಣಕ್ಕೆ ಮನವಿ ಸಲ್ಲಿಸಿದ್ದೇನೆ. ಇದೀಗ ಈ ಬಸ್ ನಿಲ್ದಾಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಾಣ ಹಾಗೂ ಕಟ್ಟಡದ ದುರಸ್ಥಿಯನ್ನು ನನ್ನ ಗಮನಕ್ಕೆ ಬಾರದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಹಳೆ ಕಟ್ಟಡ ತೆರವು:

ಬಸ್ ನಿಲ್ದಾಣವನ್ನು ರಸ್ತೆ ಮಟ್ಟಕ್ಕೆ ಏರಿಸದೇ ತಗ್ಗಿನ ಪ್ರದೇಶದಲ್ಲಿಯೇ ಕಾಮಗಾರಿ ನಡೆಸುತ್ತಿದ್ದು, ಮಳೆಗಾಲದಲ್ಲಿ ರಸ್ತೆಯ ಮೇಲೆ ಹರಿಯುವ ನೀರು ಬಸ್ ನಿಲ್ದಾಣಕ್ಕೆ ನುಗ್ಗುತ್ತದೆ. ಹಾಗಾಗಿ ಕಾಮಗಾರಿ ನಿಲ್ಲಿಸಲು ಕೆಎಸ್.ಆರ್.ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಮೂಲಕ ತಿಳಿಸಿದ್ದೇನೆ. ಮತ್ತೊಮ್ಮೆ ಸಾರಿಗೆ ಸಚಿವರನ್ನು ಭೇಟಿ ಮಾಡಿ ಇನ್ನಷ್ಟು ಅನುದಾನ ತಂದು ನೂತನ ಕಟ್ಟಡ ನಿರ್ಮಿಸಲಾಗುವುದು ಎಂದರು.

ನೆಲಮಂಗಲ ತಹಸೀಲ್ದಾರ್ ಅಮೃತ್ ಅತ್ರೇಶ್, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಅಂಚೆಮನೆ ಪ್ರಕಾಶ್, ಶಿವಕುಮಾರ್, ಹೊಸಳಯ್ಯ, ಜಗದೀಶ್, ಚಂದ್ರಶೇಖರ್, ಪಾರ್ಥರಾಜು ನಾರಾಯಣ, ಅಜ್ಜಯ್ಯ ಸೇರಿದಂತೆ ಹಲವರಿದ್ದರು.---------

ದಾಬಸ್‌ಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಎನ್.ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

-----

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌