ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕರ ಭೇಟಿ

KannadaprabhaNewsNetwork |  
Published : Jul 13, 2024, 01:31 AM IST
12ಸಿಎಚ್‌ಎನ್‌51ಹನೂರು ಮಲೆಯ ಮಹದೇಶ್ವರನ ಬೆಟ್ಟಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಮಾದೇಶ್ವರನ ದರ್ಶನ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಹನೂರು ಮಲೆ ಮಹದೇಶ್ವರನ ಬೆಟ್ಟಕ್ಕೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಮಾದೇಶ್ವರನ ದರ್ಶನ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ಶಾಸಕ ಎಂ.ಆರ್ ಮಂಜುನಾಥ್ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿ ಮಾದೇಶ್ವರನ ದರ್ಶನ ಪಡೆದು ಕ್ಷೇತ್ರ ಅಭಿವೃದ್ಧಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಮಂಜುನಾಥ್ ವೀಕ್ಷಿಸಿ ಅಧಿಕಾರಿಗಳ ಜೊತೆ 512 ಕೊಠಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.ಸಾಮೂಹಿಕ ವಿವಾಹಕ್ಕೆ ಸಿಎಂ ಆಗಮನ: ಪ್ರತಿ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಾಮೂಹಿಕ ವಿವಾಹ ಸಾಂಪ್ರದಾಯದಂತೆ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಸಾಮೂಹಿಕ ವಿವಾಹ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿರುವ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು, ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳು ಬರಲಿದ್ದಾರೆ. ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಎಂದು ಸೂಚನೆ ನೀಡಿದರು.

ದೊಡ್ಡ ಕೆರೆ ಪರಿಶೀಲನೆ: ಮಲೆ ಮಾದೇಶ್ವರ ಬೆಟ್ಟದಲ್ಲಿರುವ ದೊಡ್ಡಕೆರೆ ಕೊಳವನ್ನು ಸಹ ವೀಕ್ಷಣೆ ಮಾಡಿ ಕೆರೆ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜೊತೆಗೆ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿ ಸಿಬ್ಬಂದಿ ವರ್ಗ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು

ಪೌರಕಾರ್ಮಿಕರ ಜೊತೆ ಮಾತುಕತೆ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಜೊತೆ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ, ಮಲೆ ಮಾದೇಶ್ವರ ಬೆಟ್ಟದ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಭಕ್ತಾದಿಗಳಿಗೆ ಅನುಕೂಲ ಮಾಡಬೇಕಾಗಿ ಸೂಚನೆ ನೀಡಿದರು. ಈ ವೇಳೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ