ಕಾಗೇರಿ ಹೇಳಿಕೆಗೆ ಶಾಸಕ ಶಿವರಾಮ ಹೆಬ್ಬಾರ್ ಖಂಡನೆ

KannadaprabhaNewsNetwork |  
Published : Oct 12, 2026, 02:30 AM IST
ಫೋಟೋ ಅ.೧೦ ವೈ.ಎಲ್.ಪಿ. ೦೫ | Kannada Prabha

ಸಾರಾಂಶ

ಮನೆಯ ಹಕ್ಕಿನ ಬಗ್ಗೆ ಮಾತನಾಡುವ ಸಂಸದ ಕಾಗೇರಿ, ಬಡ ಮತದಾರರ ಹಕ್ಕುಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂಬುದನ್ನು ಪ್ರಶ್ನಿಸಬೇಕಾಗಿದೆ.

ಯಲ್ಲಾಪುರ: ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ನಿರಾಕರಣೆ ಮತ್ತು ಇ- ಸ್ವತ್ತು ೨.೦ ತಂತ್ರಾಂಶದಿಂದ ಆಸ್ತಿಗಳನ್ನು ಕೈಬಿಡುವ ಕುರಿತು ಕಳೆದ ಆ. ೧೩ರಂದು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡಿರುವುದನ್ನು ಕೇವಲ ಕಣ್ಣೊರೆಸುವ ತಂತ್ರ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ಹೇಳಿಕೆಯನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಆದೇಶದಿಂದ ಜನತೆಗೆ ಉಂಟಾಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕಾನೂನು ರೂಪಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮನೆಯ ಹಕ್ಕಿನ ಬಗ್ಗೆ ಮಾತನಾಡುವ ಸಂಸದ ಕಾಗೇರಿ, ಬಡ ಮತದಾರರ ಹಕ್ಕುಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂಬುದನ್ನು ಪ್ರಶ್ನಿಸಬೇಕಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಜನತೆಗೆ ತೊಂದರೆ ಉಂಟುಮಾಡುತ್ತಿರುವ ತೆರಿಗೆ ಸಂಗ್ರಹದ ಆದೇಶಕ್ಕೆ ಸೂಕ್ತ ಕಾನೂನು ರೂಪಿಸುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಹೆಬ್ಬಾರ್ ಭರವಸೆ ನೀಡಿದ್ದಾರೆ.

ಕಾಗೇರಿಯವರು ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಲೋಕಸಭೆಯ ಅಧಿವೇಶನದಲ್ಲಿ ಪ್ರದರ್ಶಿಸಲಿ. ಅತಿಕ್ರಮಣದಾರರಿಗೆ ಭೂಮಿ ಮಂಜೂರು ಮಾಡಲು ಸಂಬಂಧಿಸಿದಂತೆ ಮೂರು ತಲೆಮಾರುಗಳ ಆಸ್ತಿ ವಾರಸುದಾರಿಕೆಯ ಮಾನದಂಡವನ್ನು ಒಂದು ತಲೆಮಾರಿಗೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕಾನೂನು ತಿದ್ದುಪಡಿಗೆ ಪ್ರಯತ್ನಿಸಲಿ. ಆಗ ಮಾತ್ರ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದಂತಾಗುತ್ತದೆ ಎಂದಿದ್ದಾರೆ. ಸಾತೊಡ್ಡಿ ರಸ್ತೆಯಲ್ಲಿ ಬೃಹತ್ ಕಡಿಜೇನು ಗೂಡು, ಆತಂಕ

ಯಲ್ಲಾಪುರ: ಪಟ್ಟಣದ ಸಾತೊಡ್ಡಿ ಜಲಪಾತದ ರಸ್ತೆಯಲ್ಲಿ(ಮುಸ್ಲಿಂ ಕಬರಸ್ಥಾನಕ್ಕಿಂತ ಸ್ವಲ್ಪ ಮುಂಭಾಗದಲ್ಲಿ) ಮರದ ಟೊಂಗೆಯೊಂದಕ್ಕೆ ಬೃಹತ್ ಗಾತ್ರದ ಕಡಿಜೇನು ಗೂಡು ಕಟ್ಟಿದೆ.ಅದರಲ್ಲಿ ಸುಮಾರು ಸಾವಿರಕ್ಕೂ ಹೆಚ್ಚಿನ ಕಡಿಜೇನು ಇರಬಹುದೆಂದು ಅಂದಾಜಿಸಲಾಗಿದೆ. ಆ ಗೂಡಿನ ಭಾರಕ್ಕೆ ಟೊಂಗೆ ಬಗ್ಗಿ ಕೆಳಗೆ ಇಳಿಯುತ್ತಿದೆ. ಬಸ್ಸಿಗೆ ಆಕಸ್ಮಿಕ ತಾಗಿದರೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಕಡಿಜೇನು ಕಡಿದು ಪ್ರಾಣಾಪಾಯಕ್ಕೂ ತುತ್ತಾಗಬಹುದು. ಆಸ್ಪತ್ರೆಗೆ ಸೇರುವ ಆತಂಕವಿದೆ. ಇವು ಅಷ್ಟು ವಿಷಕಾರಿ ಹುಳುಗಳಾಗಿವೆ. ಈ ಕುರಿತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯಾಧಿಕಾರಿಗಳು ಹಾಗೂ ವಲಯಾರಣ್ಯಾಧಿಕಾರಿಗಳಿಗೆ ಈಗಾಗಲೇ ಮಾಹಿತಿ ನೀಡಿದೆ. ಅವನ್ನು ಅಲ್ಲಿಂದ ಜಾಗ ಖಾಲಿ ಮಾಡಿಸುವಂತೆ ಸಾರ್ವಜನಿಕರ ಪರವಾಗಿ ವಿನಂತಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ