ರಾಜ್ಯ ಬಜೆಟ್‌ ಕುರಿತು ಶಾಸಕ ಶ್ರೀನಿವಾಸ್‌ ಅಸಮಾಧಾನ

KannadaprabhaNewsNetwork |  
Published : Mar 08, 2026, 01:15 AM IST
ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಎಸ್ ಕೊಡಗಿಹಳ್ಳಿ , ಕೊಡಗಿಹಳ್ಳಿ ಪಾಳ್ಯ, ಚಿಕ್ಕೋನಹಳ್ಳಿ, ಹೊಸಪಾಳ್ಯ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ  ಎಸ್ .ಆರ್ .ಶ್ರೀನಿವಾಸ್ . | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಬಜೆಟ್‌ ಕುರಿತು ಆಡಳಿತ ಪಕ್ಷದ ಶಾಸಕ ಎಸ್‌. ಆರ್‌. ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದಾರೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ರಾಜ್ಯ ಸರ್ಕಾರದ ಬಜೆಟ್‌ ಕುರಿತು ಆಡಳಿತ ಪಕ್ಷದ ಶಾಸಕ ಎಸ್‌. ಆರ್‌. ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದಾರೆ. ಶನಿವಾರ ತಾಲೂಕಿನ ಕಸಬಾ ಹೋಬಳಿ ಎಸ್ ಕೊಡಗಿಹಳ್ಳಿ , ಕೊಡಗಿಹಳ್ಳಿ ಪಾಳ್ಯ, ಚಿಕ್ಕೋನಹಳ್ಳಿ, ಹೊಸಪಾಳ್ಯ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ ಉತ್ತಮವಾಗಿದ್ದು, ಜಿಲ್ಲೆಗೆ ಬಜೆಟ್ ನಲ್ಲಿ ಶೂನ್ಯ ಸಿಕ್ಕದೆ. ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ಇದರಿಂದಾಗಿ ನಮಗೆ ಬೇಸರವಾಗಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡರು.

ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಬಹು ನಿರೀಕ್ಷಿತ ಬಜೆಟ್ ಅನ್ನು ನಿರೀಕ್ಷೆ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್‌ ಅವರ ನೇತೃತ್ವದಲ್ಲಿ ಎಸ್ಟಿಮೆಟ್‌ ಮಾಡಿ ನೀಡಲಾಗಿತ್ತು. ಆದರೆ ಯಾವುದೇ ರೀತಿಯಲ್ಲಿ ಹಣ ನೀಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ತಾಲೂಕಿಗೆ ಸ್ವಲ್ಪವಾದರೂ ಹಣ ಮೀಸಲಿಸಿಡಲಾಗಿತ್ತು. ವಸತಿ ಯೋಜನಯಡಿ ಸಹ ಬಿಜೆಪಿ ಸರ್ಕಾರ ಸಹ ಸರಿಯಾಗಿ ಕೆಲಸ ಮಾಡಲಿಲ್ಲ. ಇದರಿಂದಾಗಿ ಬಡವರಿಗೆ ಮನೆ ಕೊಡಲು ಸಾಧ್ಯವಾಗಲಿಲ್ಲ. ಈಗ ನಮ್ಮದೇ ಸರ್ಕಾರವಿದೆ. ಆದರೂ ಸಹ ಇದುವರೆಗೆ ಒಂದೇ ಒಂದು ವಸತಿಯನ್ನು ನೀಡದೆ ಇರುವುದು ಬೇಸರದ ಸಂಗತಿ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು. ಇರಾನ್ ಇರಾಕ್ ಅಮೆರಿಕ ನಡುವೆ ನಡೆಯುತ್ತಿರುವ ಯುದ್ದದಿಂದ ಭಾರತ ದೇಶಕ್ಕೂ ಆರ್ಥಿಕ ನಷ್ಟ ಉಂಟಾಗುತ್ತದೆ. ಈ ಯುದ್ಧವು ನಿರಂತರವಾಗಿ ಮುಂದುವರೆದರೆ ಪೆಟ್ರೋಲ್ ಡೀಸೆಲ್ ಗೂ ಹೊಡೆತ ಬೀಳಲಿದ್ದು ಯಾವ ಹಂತಕ್ಕೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.ಈ ವೇಳೆ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ ಆರ್ ವೆಂಕಟೇಶ್, ಎ ಇ ಇ ಗೋಪಿನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜ್ ತಾಲೂಕು ಅಧ್ಯಕ್ಷ ವೆಂಕಟೇಗೌಡ, ಉಂಡೆ ರಾಮಣ್ಣ, ರಾಜಣ್ಣ, ಗುತ್ತಿಗೆದಾರರು ರವಿ ಕೃಷ್ಣೇಗೌಡ, ಸೋಮಶೇಖರ್, ಅಶ್ವತ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಖರೀದಿ ದರ ಲೀಟರ್‌ಗೆ 50 ಪೈಸೆ ಹೆಚ್ಚಳ: ಚಿಮುಲ್ ಅಧ್ಯಕ್ಷ ವಿ.ಮಂಜುನಾಥರೆಡ್ಡಿ
ಸವಾಲು ಎದುರಿಸಲು, ತ್ಯಾಗಕ್ಕೂ ಸಿದ್ಧವಾಗಿರಬೇಕು