ಪುತ್ತೂರು ತಾಲೂಕು ಇಲಾಖಾ ಕಚೇರಿಗೆ ಶಾಸಕ ದಿಢೀರ್ ಭೇಟಿ, ಪರಿಶೀಲನೆ

KannadaprabhaNewsNetwork |  
Published : Mar 16, 2025, 01:48 AM IST
ಫೋಟೋ: ೧೫ಪಿಟಿಆರ್-ಎಂಎಲ್‌ಎಶಾಸಕ ಆಶೋಕ್ ಕುಮಾರ್ ರೈ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿನ ಕಚೇರಿಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಶನಿವಾರ ಬೆಳಗ್ಗೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು.

ಕಚೇರಿ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆ

ಕನ್ನಡಪ್ರಭ ವಾರ್ತೆ ಪುತ್ತೂರು

ತಾಲೂಕು ಆಡಳಿತ ಸೌಧದಲ್ಲಿನ ಕಚೇರಿಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಶನಿವಾರ ಬೆಳಗ್ಗೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು.ತಾಲೂಕು ಆಡಳಿತ ಸೌಧದಲ್ಲಿರುವ ಎಲ್ಲ ಇಲಾಖೆಗಳ ಪ್ರತಿ ವಿಭಾಗಗಳಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಭೂ ಮಾಪನಾ ಇಲಾಖೆಯ ಕಚೇರಿಯಲ್ಲಿ ಯಾರೂ ಇಲ್ಲದೇ ಇರುವುದು ಕಂಡುಬಂದಿದೆ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ ಓಪನ್ ಇಟ್ಟಿದ್ದೀರಿ ಬಂದ್ ಮಾಡಿ ಎಂದ ಶಾಸಕರೇ ಕಚೇರಿಯ ಬಾಗಿಲನ್ನು ಮುಚ್ಚಿ ಬೀಗ ಹಾಕುವಂತೆ ತಿಳಿಸಿದರು.

ದೂರಿನ ಹಿನ್ನೆಲೆಯಲ್ಲಿ ಭೇಟಿ:ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿ ಬರುತ್ತಿಲ್ಲ. ಭೂ ದಾಖಲೆಗಳ ಇಲಾಖಾ ಕಚೇರಿ ಬಂದ್ ಇದೆ ಎಂದು ಸಾಮಾಜಿಕ ಜಾಲತಾಣಗಲ್ಲಿ ಪ್ರಸಾರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಲಾಗಿದೆ. ಇಬ್ಬರು ಅಧಿಕಾರಿಗಳ ಹೊರತು ಪಡಿಸಿ ಉಳಿದೆಲ್ಲ ಅಧಿಕಾರಿಗಳು ಹಾಜರಿದ್ದರು. ಕಚೇರಿ ಬಂದ್ ಆಗಿಲ್ಲ. ರಜೆ ಹಾಕದೇ ಕಚೇರಿಗೆ ಗೈರು ಆಗಿರುವ ಅಧಿಕಾರಿಗಳಗೆ ಶೋಕಾಸ್ ನೋಟಿಸ್ ನೀಡುವಂತೆ ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?