ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಶಾಸಕ ಸುನಿಲ್‌ ಕುಮಾರ್‌ ಭೇಟಿ

KannadaprabhaNewsNetwork |  
Published : Jun 17, 2025, 12:54 AM ISTUpdated : Jun 17, 2025, 12:55 AM IST
ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಶಾಸಕ ವಿ. ಸುನಿಲ್ ಕುಮಾರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ | Kannada Prabha

ಸಾರಾಂಶ

ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಠಾರಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಠಾರಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ ರೈಟ್ಸ್ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿರುವ ₹ 1 ಕೋಟಿ ವೆಚ್ಚದ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕರು, ಬಳಿಕ ಕರ್ನಾಟಕ ಗೃಹ ಮಂಡಳಿಯ ಮೂಲಕ ನಿರ್ವಹಣೆಗೊಂಡು ₹ 3.97 ಕೋಟಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಇನ್ನೊಂದು ಪಾಲಿಟೆಕ್ನಿಕ್ ಕಟ್ಟಡದ ಪರಿಶೀಲನೆ ನಡೆಸಿದರು. ಈ ಸಂದರ್ಭ ಅವರು ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ, ತಾಂತ್ರಿಕ ಸಲಹೆಗಳನ್ನೂ ನೀಡಿದರು.ಮಳೆಗಾಲದ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ, ಮಳೆ ನೀರಿನ ನಿಕಾಸಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದು, ಹಾಗೆಯೇ ಹೈ ವೋಲ್ಟೇಜ್ ವಿದ್ಯುತ್ ಪರಿವರ್ತಕ ಹಾಗೂ ಜನರೇಟರ್‌ಗಳಿಗೆ ಪ್ರತ್ಯೇಕ ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ವಹಣೆಯಲ್ಲಿರುವ ಬಾಲಕರ ಶೌಚಾಲಯ ಕಾಮಗಾರಿಯನ್ನೂ ವೀಕ್ಷಿಸಿದ ಅವರು, ಕ್ಯಾಂಪಸ್‌ನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಯೋಜನೆಯಾದ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಕೆಜಿಟಿಟಿಐ) ನ ಪ್ರಗತಿಯ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಪ್ರಗತಿಯಲ್ಲಿ ಇರುವ ಕಾಮಗಾರಿಗಳನ್ನಾದ್ಯತೆಯ ಮೇಲೆ ಪ್ರಾಧಾನ್ಯತೆ ನೀಡುವಂತೆ ಶಾಸಕರು ಸಲಹೆ ನೀಡಿದರು ಚ್ಚುವರಿ ಅನುದಾನ ಅಗತ್ಯವಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಟೆಕ್ನಿಕ್ ಪ್ರಾಂಶುಪಾಲರು, ತಹಸೀಲ್ದಾರ್‌ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ