ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಶಾಸಕ ಸುರೇಶಗೌಡ ತುಲಾಭಾರ

KannadaprabhaNewsNetwork |  
Published : Oct 14, 2026, 01:15 AM IST
99999 | Kannada Prabha

ಸಾರಾಂಶ

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಸುರೇಶ್‌ಗೌಡ ಅವರು ಉತ್ತಮ ರಸ್ತೆಗಳು, ಏತ ನೀರಾವರಿ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಮೂಲಕ ಕ್ಷೇತ್ರದ ಜನರ ಮನೆ ಮಾತಾಗಿರುವ ಕ್ಷೇತ್ರದಲ್ಲಿ ಸಮಸ್ಯೆಗಳ ಬಗ್ಗೆ ಚೆನ್ನಾಗಿ ಅರಿತು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಸುರೇಶ್‌ಗೌಡ ಅವರ ತುಲಾಭಾರ ನೆರವೇರಿಸಿದರು.

ಶೆಟ್ಟಿಹಳ್ಳಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ನೆರವೇರಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಶಾಸಕ ಬಿ. ಸುರೇಶ್‌ಗೌಡ ಅವರು, ರಾಜ್ಯದಲ್ಲಿ ಎಂದೂ ಕಂಡರಿಯದ ಬರ ಪರಿಸ್ಥಿತಿ ಇದೆ. ಮಳೆ ಇಲ್ಲದೆ, ಬೆಳೆ ಇಲ್ಲದೆ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬಾರದು ಎಂದು ನಿರ್ಧರಿಸಿ ಕಾರ್ಯಕರ್ತರು ಮತ್ತು ಅಭಿಮಾನಿಗಳಲ್ಲೂ ಮನವಿ ಮಾಡಿದ್ದೆ. ಹಾಗಾಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.

ನಮ್ಮ ಪಕ್ಷದ ಮುಖಂಡರಾದ ಟಿ.ಸಿ. ಜನಾರ್ಧನ್ ಹಾಗೂ ಇತರ ಮುಖಂಡರ ಅಪೇಕ್ಷೆ ಮೇರೆಗೆ ಶೆಟ್ಟಿಹಳ್ಳಿ ದೇವಾಲಯದಲ್ಲಿ ತುಲಾಭಾರ ನೆರವೇರಿಸಿ ಶ್ರೀಸ್ವಾಮಿಗೆ ಹರಕೆ ಸಲ್ಲಿಸಿದ್ದೇವೆ. ಈ ಬಾರಿ ರಾಜ್ಯ ಮತ್ತು ತುಮಕೂರು ಜಿಲ್ಲೆಯಲ್ಲಿ ಬರ ನಿವಾರಣೆಯಾಗಿ ಸಮೃದ್ಧ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು.

ಎಪಿಎಂಸಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಟಿ.ಸಿ. ಜನಾರ್ಧನ್ ಮಾತನಾಡಿ, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಹರಿಕಾರರಾಗಿರುವ ಬಿ. ಸುರೇಶ್‌ಗೌಡರ 61ನೇ ಹುಟ್ಟುಹಬ್ಬದ ಪ್ರಯುಕ್ತ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ನೆರವೇರಿಸಿ ಆಶೀರ್ವಾದ ಪಡೆದಿದ್ದೇವೆ. ದೇವರು ಅವರಿಗೆ ಇನ್ನು ಉನ್ನತ ಸ್ಥಾನ ದೊರೆಯುವಂತೆ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಸುರೇಶ್‌ಗೌಡ ಅವರು ಉತ್ತಮ ರಸ್ತೆಗಳು, ಏತ ನೀರಾವರಿ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಮೂಲಕ ಕ್ಷೇತ್ರದ ಜನರ ಮನೆ ಮಾತಾಗಿರುವ ಕ್ಷೇತ್ರದಲ್ಲಿ ಸಮಸ್ಯೆಗಳ ಬಗ್ಗೆ ಚೆನ್ನಾಗಿ ಅರಿತು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಸುರೇಶ್‌ಗೌಡ ಅವರು ಶಾಸಕರಾದ ಬಳಿಕ ತುಮಕೂರು ಗ್ರಾಮಾಂತರ ಕ್ಷೇತ್ರದ ಚಿತ್ರಣವೇ ಬದಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜನಾರ್ಧನ್ ಟಿ.ಸಿ., ಅರುಣ್‌ಕುಮಾರ್, ರವಿಶಂಕರ್, ಮನು, ದೊಡ್ಡೇಗೌಡ, ರಾಮಕೃಷ್ಣ, ಗಂಗರಾಜು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ಬಿಮೋಲ್ ವಿರುದ್ಧ ಬಿಜೆಪಿ ಹೋರಾಟ
ಎನ್‌ಡಿಎ ಅಭ್ಯರ್ಥಿ ರಂಗನಾಥ್ ಬೆಂಬಲಿಸಲು ಇ.ಕೃಷ್ಣಪ್ಪ ಕರೆ