ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದ ಶಾಸಕ ಸುರೇಶ್

KannadaprabhaNewsNetwork |  
Published : Jun 11, 2026, 12:15 AM IST
10ಎಚ್ಎಸ್ಎನ್9 :  | Kannada Prabha

ಸಾರಾಂಶ

ಶಾಸಕ ಎಚ್. ಕೆ. ಸುರೇಶ್ ಮಾತನಾಡಿ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಗಿಡಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪರಿಸರವನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ . ಅಭಿವೃದ್ಧಿಗೆ ತೊಂದರೆಯಾಗದ ರೀತಿಯಲ್ಲಿ ಪರಿಸರವನ್ನು ಕಾಪಾಡಿಕೊಳ್ಳುವುದು ಅಗತ್ಯ. ಸರ್ಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಕಡಿಮೆ ದರದಲ್ಲಿ ಸಸಿಗಳನ್ನು ನೀಡುತ್ತಿದ್ದು, ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಮರವನ್ನು ನೆಡುವ ಸಂಕಲ್ಪ ಮಾಡಬೇಕು. ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ಪ್ರತಿಯೊಂದು ಮನೆ ಮತ್ತು ಶಾಲೆಯಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪಾಲನೆ-ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಬೇಲೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತ ಜ್ಞಾನ ವಿಜ್ಞಾನ ಸಮಿತ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಹಸಿರು ಭೂಮಿ ಪ್ರತಿಷ್ಠಾನ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಿಳಾ ಘಟಕದ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಜಾಥಾ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಚನ್ನಕೇಶವ ದಾಸೋಹ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್. ಕೆ. ಸುರೇಶ್, ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಗಿಡಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪರಿಸರವನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ . ಅಭಿವೃದ್ಧಿಗೆ ತೊಂದರೆಯಾಗದ ರೀತಿಯಲ್ಲಿ ಪರಿಸರವನ್ನು ಕಾಪಾಡಿಕೊಳ್ಳುವುದು ಅಗತ್ಯ. ಸರ್ಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಕಡಿಮೆ ದರದಲ್ಲಿ ಸಸಿಗಳನ್ನು ನೀಡುತ್ತಿದ್ದು, ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಮರವನ್ನು ನೆಡುವ ಸಂಕಲ್ಪ ಮಾಡಬೇಕು. ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ಪ್ರತಿಯೊಂದು ಮನೆ ಮತ್ತು ಶಾಲೆಯಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪಾಲನೆ-ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.ಭಾರತ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಹಾಗೂ ವಕೀಲ ಎಚ್. ಆರ್. ಚಂದ್ರು ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಕೆಲ ಸಂಘಟನೆಗಳ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರದ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ಬಾಲ್ಯದಿಂದಲೇ ತಿಳಿಸಿಕೊಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಶ್ರೀಧರ್‌ ಕಂಕಣವಾಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ಪುರಸಭೆ ಅಧ್ಯಕ್ಷ ಅಕ್ರಮ್ ಶರೀಫ್, ಪಿಎಸ್‌ಐ ಎಸ್.ಜಿ. ಪಾಟೀಲ್, ವಲಯ ಅರಣ್ಯಾಧಿಕಾರಿ ಶೈಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥ ಕುಮಾರಿ, ಸಾಮಾಜಿಕ ಕಾರ್ಯಕರ್ತೆ ಚಂದ್ರಕಲಾ, ಮಹೇಶ್ ಹಾಗೂ ಪರಿಸರ ಪ್ರೇಮಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ
ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡಿ