ಹಾಸನ: ನಗರದ ಸಮೀಪ ಬಿ.ಕಾಟಿಹಳ್ಳಿ ಪ್ರದೇಶದಲ್ಲಿ ಮಹಾನಗರ ಪಾಲಿಕೆಯ ಸಿಎಂಐಡಿಪಿ ಅನುದಾನದಡಿ ಸುಮಾರು ೧ ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ (ಯುಜಿಡಿ) ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಬಿ. ಕಾಟಿಹಳ್ಳಿ ವ್ಯಾಪ್ತಿಯಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂಬುದು ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮನವಿಗೆ ಸ್ಪಂದಿಸಿ, ಇದೀಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ನಿವಾಸಿಗಳಿಗೆ ಒಳಚರಂಡಿ ಸಮಸ್ಯೆಯಿಂದ ಸಾಕಷ್ಟು ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಆಶಯ ವ್ಯಕ್ತಪಡಿಸಿದರು.