ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಶಾಸಕ ಸ್ವರೂಪ್ ಸೂಚನೆ

KannadaprabhaNewsNetwork |  
Published : May 15, 2026, 01:45 AM IST
13ಎಚ್ಎಸ್ಎನ್12 :  | Kannada Prabha

ಸಾರಾಂಶ

ಗ್ರಾಮದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸುಮಾರು ೧ ಕೋಟಿ ೩೩ ಲಕ್ಷ ರುಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಸಮರ್ಪಕ ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಹಲವು ವರ್ಷಗಳಿಂದ ಗ್ರಾಮಸ್ಥರು ಎದುರಿಸುತ್ತಿದ್ದ ರಸ್ತೆ ಮತ್ತು ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿ ಆರಂಭಿಸಲಾಗಿದೆ ಎಂದು ಶಾಸಕ ಸ್ವರೂಪ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ದಾಸರಕೊಪ್ಪಲು ಗ್ರಾಮದಲ್ಲಿ ಮಹಾನಗರ ಪಾಲಿಕೆಯ ಅನುದಾನದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರದಂದು ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಅವರು ವಿಧಿವಿಧಾನಗಳೊಂದಿಗೆ ಗುದ್ದಲಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಿದರು.

ಗ್ರಾಮದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸುಮಾರು ೧ ಕೋಟಿ ೩೩ ಲಕ್ಷ ರುಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಸಮರ್ಪಕ ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಹಲವು ವರ್ಷಗಳಿಂದ ಗ್ರಾಮಸ್ಥರು ಎದುರಿಸುತ್ತಿದ್ದ ರಸ್ತೆ ಮತ್ತು ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿ ಆರಂಭಿಸಲಾಗಿದೆ.ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಬಳಿಕ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಮಾತನಾಡಿ, ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖಂಡರು, ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದ ರೀತಿಯಲ್ಲಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಪ್ರಮುಖ ಅಂಶವಾಗಿದೆ. ಉತ್ತಮ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಸಂಚಾರ ಸುಗಮವಾಗುವುದರ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮಳೆಗಾಲದಲ್ಲಿ ನೀರು ನಿಲ್ಲುವುದು, ಕೆಸರು ಮತ್ತು ಅಸ್ವಚ್ಛತೆ ಉಂಟಾಗುವುದು ಗ್ರಾಮಸ್ಥರಿಗೆ ತೊಂದರೆಯಾಗುತ್ತಿತ್ತು. ಇದೀಗ ಸಮರ್ಪಕ ಚರಂಡಿ ವ್ಯವಸ್ಥೆ ನಿರ್ಮಾಣವಾಗುವುದರಿಂದ ಮಳೆ ನೀರು ಸರಾಗವಾಗಿ ಹರಿದು ಪರಿಸರ ಸ್ವಚ್ಛತೆ ಕಾಪಾಡಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು. ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಮುಖ್ಯ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ ದೀರ್ಘಕಾಲ ಬಾಳಿಕೆ ಬರುವ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿ ವೇಳೆ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಅಧಿಕಾರಿಗಳು ಕೂಡ ನಿಯಮಿತವಾಗಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಯ ಪ್ರಗತಿಯನ್ನು ಗಮನಿಸಬೇಕು ಎಂದು ಸೂಚಿಸಲಾಯಿತು. ಸ್ಥಳೀಯ ನಿವಾಸಿಗಳು ಮಾತನಾಡಿ, ದಾಸರಕೊಪ್ಪಲು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ. ಮಳೆ ಬಂದಾಗ ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಚರಂಡಿ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ನೀರು ರಸ್ತೆಗಳಲ್ಲಿ ನಿಂತು ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿತ್ತು. ಇದೀಗ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಗ್ರಾಮದ ಹಿರಿಯರು, ಯುವಕರು ಹಾಗೂ ಮಹಿಳೆಯರು ಭಾಗವಹಿಸಿದ್ದರು. ಕಾಮಗಾರಿ ಶೀಘ್ರ ಪೂರ್ಣಗೊಂಡು ಗ್ರಾಮಕ್ಕೆ ಉತ್ತಮ ಮೂಲಸೌಕರ್ಯ ದೊರೆಯಲಿ ಎಂದು ಗ್ರಾಮಸ್ಥರು ಆಶಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಮುಚ್ಚುವ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ
ಸಾಂಸ್ಕೃತಿಕ ಮೌಲ್ಯದೊಂದಿಗೆ ಇನ್ಫೋಸಿಸ್‌ ಕಾರ್ಯನಿರ್ವಹಣೆ