ಹಾಸ್ಟೆಲ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸ್ವರೂಪ್ ಚಾಲನೆ

KannadaprabhaNewsNetwork |  
Published : Mar 07, 2025, 12:48 AM IST
6ಎಚ್ಎಸ್ಎನ್11 : ಶಾಸಕ ಸ್ವರೂಪ್‌ ಗುದ್ದಲಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಎಸ್ಸಿ, ಎಸ್ಟಿ ಪೋಸ್ಟ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎರಡು ಕೋಟಿ ರು. ವೆಚ್ಚದ ಹೆಚ್ಚುವರಿ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ ಸೇರಿದಂತೆ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು. ಹೆಚ್ಚುವರಿ ೬ ಕೊಠಡಿ ಮತ್ತು ಡೈನಿಂಗ್ ಹಾಲ್ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆಯನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಮುಗಿದು ಹಾಸ್ಟೆಲಿನ ಮಕ್ಕಳಿಗೆ ಅನುಕೂಲವಾಗಲಿದೆ. ೨ ಕೋಟಿಯಲ್ಲಿ ಈಗಾಗಲೇ ೧ ಕೋಟಿ ರು. ಬಿಡುಗಡೆ ಆಗಿದ್ದು, ಉಳಿದ ಹಣವು ಕೂಡ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಆಕಾಶವಾಣಿ ಹಿಂಭಾಗ ಇರುವ ಎಸ್ಸಿ, ಎಸ್ಟಿ ಪೋಸ್ಟ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎರಡು ಕೋಟಿ ರು. ವೆಚ್ಚದ ಹೆಚ್ಚುವರಿ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ ಸೇರಿದಂತೆ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿ, ಹೆಚ್ಚುವರಿ ೬ ಕೊಠಡಿ ಮತ್ತು ಡೈನಿಂಗ್ ಹಾಲ್ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆಯನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಮುಗಿದು ಹಾಸ್ಟೆಲಿನ ಮಕ್ಕಳಿಗೆ ಅನುಕೂಲವಾಗಲಿದೆ. ೨ ಕೋಟಿಯಲ್ಲಿ ಈಗಾಗಲೇ ೧ ಕೋಟಿ ರು. ಬಿಡುಗಡೆ ಆಗಿದ್ದು, ಉಳಿದ ಹಣವು ಕೂಡ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ. ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳ ಸಂಬಂಧ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರು ಕೂಡ ಕುಂದುಕೊರತೆ ವೀಕ್ಷಿಸಿದ್ದು, ನಾವು ಕೂಡ ವೀಕ್ಷಣೆ ಮಾಡಲಾಗಿದೆ ಎಂದರು. ಮುಂದಿನ ವಾರದಲ್ಲಿ ಮಕ್ಕಳ ಜೊತೆ ಸಮಾಲೋಚನೆ ಮಾಡಿ ಎ ಡಿ ಮನುಕುಮಾರ್ ಜೊತೆ ಚರ್ಚೆ ಮಾಡಿ ಏನೇನು ಅನಾನುಕೂಲವಿದೆ ಎಲ್ಲಾ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡ್ರೈನೇಜ್ ಕೂಡ ಹಾಳಾಗಿದ್ದು, ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ಮುಖಂಡ ದೊಡ್ಡಗದವನಹಳ್ಳಿ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮನುಕುಮಾರ್, ಕೆ.ಆರ್.ಡಿ.ಎಲ್. ಸಹಾಯಕ ಕಾರ್ಯಪಾಲಕ ಅಭಿಯಂತರರು ಅಣ್ಣಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರರು ನವ್ಯಶ್ರೀ, ಜೆಡಿಎಸ್ ಜಿಲ್ಲಾ ಮಾಧ್ಯಮ ವಕ್ತಾರರಾದ ರಘು ಹೊಂಗೆರೆ, ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?