ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ

KannadaprabhaNewsNetwork |  
Published : May 21, 2026, 01:30 AM IST
ಹಾನಗಲ್ಲಿನ  ಪರಿವರ್ತನ ಕಲಿಕಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಲಾಪೂರ್ವ ಸಿದ್ಧತಾ ತರಬೇತಿ ಶಿಬಿರದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. | Kannada Prabha

ಸಾರಾಂಶ

ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಿ ಜನರ ಬಳಕೆಗೆ ಒದಗಿಸುವ ಉದ್ದೇಶ ಹೊಂದಿದ್ದೇವೆ. ಯರೇಹಳ್ಳಿ ಗ್ರಾಮದಲ್ಲಿ ಇನ್ನೂ ಕೆಲವು ಮೂಲಭೂತ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಅವುಗಳ ಪರಿಹಾರಕ್ಕೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಮಸ್ಥರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಉಳಿದ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಅವರು ಬುಧವಾರದಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕೆ.ಆರ್‌.ಐ.ಡಿ.ಎಲ್ ಅನುದಾನದಡಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಕಾಮಗಾರಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದು, ಗ್ರಾಮದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ನೆರವಾಗಲಿದೆ. ಯರೇಹಳ್ಳಿ ಗ್ರಾಮದ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಶಾಸಕರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಗ್ರಾಮೀಣ ಭಾಗದ ಅಭಿವೃದ್ಧಿಗೆ ಮೂಲಸೌಕರ್ಯಗಳ ವೃದ್ಧಿ ಅತ್ಯಂತ ಮುಖ್ಯ. ಉತ್ತಮ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಓಡಾಟ ಸುಗಮವಾಗುವುದರ ಜೊತೆಗೆ ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಿ ಜನರ ಬಳಕೆಗೆ ಒದಗಿಸುವ ಉದ್ದೇಶ ಹೊಂದಿದ್ದೇವೆ. ಯರೇಹಳ್ಳಿ ಗ್ರಾಮದಲ್ಲಿ ಇನ್ನೂ ಕೆಲವು ಮೂಲಭೂತ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ಅವುಗಳ ಪರಿಹಾರಕ್ಕೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಮಸ್ಥರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಉಳಿದ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು, ಯುವಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರುದ್ರಭೂಮಿಗಾಗಿ ವೀರಶೈವ ಲಿಂಗಾಯತ ಸಮಾಜದಿಂದ ತಹಸೀಲ್ದಾರರಿಗೆ ಮನವಿ
ಪರೀಕ್ಷಾ ಪ್ರಾಧಿಕಾರಗಳು ಜವಾಬ್ದಾರಿಯಿಂದ ಕೆಲಸ ಮಾಡಲಿ