ತುರುವನೂರಿನಲ್ಲಿ ಗೋಶಾಲೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ

KannadaprabhaNewsNetwork |  
Published : Feb 04, 2024, 01:30 AM ISTUpdated : Feb 04, 2024, 01:31 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್  ಬಾಟಂ | Kannada Prabha

ಸಾರಾಂಶ

ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ತುರುವನೂರಿನಲ್ಲಿ ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದೊಂದಿಗೆ ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಶಾಲೆಗೆ ಚಾಲನೆ ನೀಡಿ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಾವು ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಹೀಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರಿಗೆ ತಲುಪಿಸಿದ್ದೇವೆ. ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಸಿಲ್ದಾರ್ ಡಾ.ನಾಗವೇಣಿ, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರುಗಳು, ಮುಖಂಡರುಗಳಾದ ಸಂತೋಷ, ಕಾಕಿ ಹನುಮಂತರೆಡ್ಡಿ, ವೀವೇಕಪ್ಪ, ನಾಗರಾಜ್, ಪವನ್ ಕುಮಾರ್, ಡಿ.ಆರ್.ಮಂಜುನಾಥ್, ಮುಖಂಡರು, ಸಾರ್ವಜನಿಕರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ