ಕಂದಾಯ , ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕ್ಷೇತ್ರ ವ್ಯಾಪ್ತಿಯ 23 ಗ್ರಾಮ ಪಂಚಾಯಿತಿಯಲ್ಲಿ ಆಶ್ರಯ ನಿವೇಶನ ನೀಡಲು ಭೂಮಿ ಗುರುತಿಸಬೇಕು ಹಾಗೂ ವಸತಿ, ನಿವೇಶನ ರಹಿತರ ಪಟ್ಟಿಯನ್ನು ಒಂದು ತಿಂಗಳೊಳಗೆ ಸಿದ್ಧಪಡಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 2090 ಜನ ನಿವೇಶನ ರಹಿತರಿದ್ದು, ಈ ಬಗ್ಗೆ ಪುನರ್ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅತೀ ಶೀಘ್ರದಲ್ಲಿ ಪಟ್ಟಿ ತಯಾರಿಸುವಂತೆ ತಿಳಿಸಿದರು.
ಗ್ರಾ.ಪಂ ವ್ಯಾಪ್ತಿಯಲ್ಲಿ ಇ-ಖಾತೆಗಳ ಬಗ್ಗೆ ಸಮಸ್ಯೆ ಇದ್ದು, ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಕ್ರಿಯವಾಗಿ ಕರ್ತವ್ಯ ನಿರ್ವಹಿಸಿ ಈ ಸಮಸ್ಯೆ ಬಗೆಹರಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಇಒ ಹಾಗೂ ತಮ್ಮ ಗಮನಕ್ಕೆ ತೊಡಕುಗಳ ಬಗ್ಗೆ ವಿವರಿಸಿದ ಹಿನ್ನೆಲೆಯಲ್ಲಿ ಸರ್ಕಾರದ ತಂತ್ರಾಂಶದಲ್ಲಿ ಕ್ರಯಪತ್ರ ಕಡ್ಡಾಯವಾಗಿರಬೇಕೆಂದು ತಿಳಿಸಿದ್ದಾರೆ. ಪಿತ್ರಾರ್ಜಿತ ಆಸ್ತಿಗೆ ಕ್ರಯಪತ್ರ ಇರುವುದಿಲ್ಲ. ಈ ಸಂಬಂಧ ಸರ್ಕಾರ ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.ಲಕ್ಯಾ ಮತ್ತು ಸಖರಾಯಪಟ್ಟಣ ಹೋಬಳಿ ಭಾಗದಲ್ಲಿ ವಿದ್ಯುತ್ ಸಮಸ್ಯೆ ಇರುವ ಬಗ್ಗೆ ರೈತರು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ, ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ ತಹಸೀಲ್ದಾರ್ ಡಾ. ಸುಮಂತ್, ತಾಪಂ ಇಒ ವಿಜಯಕುಮಾರ್, ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ರುದ್ರೇಶ್ ಉಪಸ್ಥಿತರಿದ್ದರು. 27 ಕೆಸಿಕೆಎಂ 2ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.