ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಉದಯ್ ದಿಢೀರ್ ಭೇಟಿ, ಪರಿಶೀಲನೆ

KannadaprabhaNewsNetwork |  
Published : Sep 22, 2025, 01:00 AM IST
21ಕೆಎಂಎನ್ ಡಿ27 | Kannada Prabha

ಸಾರಾಂಶ

ನಿಲಯದ ಆವರಣದಲ್ಲಿ ಉತ್ತಮ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ. ಅಧಿಕಾರಿಗಳು ಹಾಸ್ಟೆಲ್ ನಲ್ಲಿ ನಿರ್ವಹಣೆ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಅಭಿವೃದ್ಧಿಗೆ ಅಗತ್ಯವಿರುವ ಸೇವೆಗಳ ಪಟ್ಟಿಯನ್ನು ನೀಡಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸಮೀಪದ ಗುಡಿಗೆರೆ ಗ್ರಾಮದ ಹಿಂದುಳಿದ ವರ್ಗಗಳ ಇಲಾಖೆಯ ಡಿ.ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಕೆ.ಎಂ.ಉದಯ್ ದಿಢೀರನೇ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಲಯ ಮೇಲ್ವಿಚಾರಕರ ಜತೆಗೂಡಿ ಹಾಸ್ಟೆಲ್ ನ ಕೊಠಡಿಗಳು ಅಡುಗೆಕೋಣೆ, ದಾಸ್ತಾನು ಕೊಠಡಿಗಳು ಮತ್ತು ವಿದ್ಯಾರ್ಥಿಗಳ ವಸತಿ ಕೊಠಡಿಗಳಿಗೆ ಆಗಮಿಸಿ ವೀಕ್ಷಿಸಿದ ನಂತರ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದ ಅವರು, ಹಾಸ್ಟೆಲ್ ಆವರಣ ಹಾಗೂ ಕೊಠಡಿಗಳ ಸ್ವಚ್ಛತೆ ಹಾಗೂ ಸೌಲಭ್ಯಗಳ ಬಗ್ಗೆ ಅವಲೋಕಿಸಿದರು. ನಂತರ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ನಿಲಯದಲ್ಲಿ ಮೂಲ ಸೌಕರ್ಯಗಳನ್ನು ಸಮಪರ್ಕವಾಗಿ ತಲುಪಿಸುವಂತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಒದಗಿಸುವಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ನಿಲಯದ ಆವರಣದಲ್ಲಿ ಉತ್ತಮ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ. ಅಧಿಕಾರಿಗಳು ಹಾಸ್ಟೆಲ್ ನಲ್ಲಿ ನಿರ್ವಹಣೆ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಅಭಿವೃದ್ಧಿಗೆ ಅಗತ್ಯವಿರುವ ಸೇವೆಗಳ ಪಟ್ಟಿಯನ್ನು ನೀಡಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸುನೀಲ್ ಕುಮಾರ್, ಮಾದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರೋಟರಿ ಸಂಸ್ಥೆಯಿಂದ ನಿಮಿಷಾಂಬ ದೇಗುಲದಲ್ಲಿ ಶಿಶು ಸ್ತನ್ಯಪಾನ ಕೇಂದ್ರ ಕೊಡುಗೆ

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ನಿಮಿಷಾಂಬ ದೇವಸ್ಥಾನಕ್ಕೆ ಶಿಶು ಸ್ತನ್ಯಪಾನ ಕೇಂದ್ರವನ್ನು ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್ ಅವರ ಮೂಲಕ ಕೊಡುಗೆಯಾಗಿ ನೀಡಿದರು.

ನಂತರ ದಿನೇಶ್ ಮಾತನಾಡಿ, ರೋಟರಿ ಸಂಸ್ಥೆ ಹತ್ತಾರು ಸಮಾಜಮುಖಿಯಾಗಿ ಕೆಲಸಗಳಲ್ಲಿ ತೊಡಗಿದ್ದು, ಶ್ರೀನಿಮಿಷಾಂಬ ದೇವಸ್ಥಾನದ ಆವರಣದಲ್ಲಿ ಹಾಲುಣಿಸಲು ಪ್ರತ್ಯೇಕ ಕೋಣೆ ವ್ಯವಸ್ಥೆ ಮಾಡಿರುವ ತುಂಬಾ ಶ್ಲಾಘನೀಯ ಎಂದರು.

ರೋಟರಿ ಸಂಸ್ಥೆ ಅಧ್ಯಕ್ಷ ಡಾ.ರಾಘವೇಂದ್ರ ಮಾತನಾಡಿ, ನಿಮಿಷಾಂಬ ದೇವಸ್ಥಾನಕೆ ಚಿಕ್ಕ ಮಗುವನ್ನು ಕರೆದುಕೊಂಡು ಬರುವ ತಾಯಂದಿರು ತಮ್ಮ ಮಗುವಿನ ಹಸಿವನ್ನು ಯಾವುದೇ ಮುಜುಗರವಿಲ್ಲದೆ ಹಾಲುಣಿಸಿ ನೀಗಿಸಬಹುದು ಎಂಬ ಉದ್ದೇಶದಿಂದ ಪ್ರತ್ಯೇಕ ಶಿಶು ಸ್ತನ್ಯಪಾನ ಕೇಂದ್ರ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಗೆ ಬರುವ ತಾಯಿಂದರು ಬಳಸಿಕೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿನಂತಿಸಿದರು.

ಈ ವೇಳೆ ನಿಮಿಷಾಂಬ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ದಯಾನಂದ್, ನಿರ್ದೇಶಕರು, ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ, ರೋಟರಿ ಕ್ಲಬ್ ಕಾರ್ಯದರ್ಶಿ ನಾಗೇಂದ್ರ, ರಮೇಶ್, ರಘು, ವಿನಯ್ ಸೇರಿದಂತೆ ಇತರರು ಇದ್ದರು.

PREV

Recommended Stories

ಸಿಬ್ಬಂದಿ ಕೊರತೆ ಬೆಂಗಳೂರು ನಗರದಲ್ಲಿ ಜಾತಿ ಗಣತಿ ವಿಳಂಬ
ಸಮೀಕ್ಷೆ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಹುನ್ನಾರ