ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೆ.ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಿಆರ್‌ಎಸ್ ಅನುದಾನದಲ್ಲಿ ನಿರ್ಮಾಣ ಮಾಡಲಿರುವ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕೇಂದ್ರದ ಸಿಆರ್‌ಎಸ್ ನಿಧಿಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗೆ ಯಾವುದೇ ರೀತಿಯ ಶಿಷ್ಟಾಚಾರ ಅನ್ವಯಿಸುವುದಿಲ್ಲ. ಇದನ್ನು ಅರಿತುಕೊಂಡು ಅವರೇ ಸ್ವಯಂ ಪ್ರೇರಿತವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೆ ನಾವಿಬ್ಬರೂ ಒಟ್ಟಿಗೆ ಸೇರಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೆವು ಎಂದರು.
ಆದರೆ, ಶಾಸಕ ಉದಯ್ ಕಾಮಗಾರಿ ಅಡ್ಡಿಪಡಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಧಮ್ಕಿ ಹಾಕಿ ಕಾಮಗಾರಿಗೆ ಚಾಲನೆ ನೀಡದಂತೆ ಕುಯುಕ್ತಿ ಬುದ್ಧಿ ಪ್ರದರ್ಶನ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಧಿಕಾರಿಗಳು ಶಾಸಕ ಉದಯ್ ಅವರ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ:
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷದೊಳಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ, ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಎಲ್ಲಾ ಸಾರ್ವತ್ರಿಕ ಚುನಾವಣೆಗ ಗಳನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ ಸ್ಪಷ್ಟಪಡಿಸಿದರು.