ಮಂಗಳೂರು: ರಾಜಕಾಲುವೆ ನೀರು ಹೊರ ನುಗ್ಗದಂತೆ ತಡೆಗೋಡೆ ನಿರ್ಮಾಣವಾಗಲಿದ್ದು, ಮುಂದೆ ಎಂ.ಜಿ. ರಸ್ತೆಯ ಭಾಗದಲ್ಲಿ ಒಂದು ಸೇತುವೆ ನಿರ್ಮಾಣಕ್ಕೂ ಎರಡು ಕೋಟಿ ರು. ಅನುದಾನ ಮೀಸಲಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಮಂಗಳೂರು: ರಾಜಕಾಲುವೆ ನೀರು ಹೊರ ನುಗ್ಗದಂತೆ ತಡೆಗೋಡೆ ನಿರ್ಮಾಣವಾಗಲಿದ್ದು, ಮುಂದೆ ಎಂ.ಜಿ. ರಸ್ತೆಯ ಭಾಗದಲ್ಲಿ ಒಂದು ಸೇತುವೆ ನಿರ್ಮಾಣಕ್ಕೂ ಎರಡು ಕೋಟಿ ರು. ಅನುದಾನ ಮೀಸಲಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕೊಡಿಯಾಲ್‌ಬೈಲ್ ವಾರ್ಡಿನ ತಾಳಿಪಾಡಿ ಮನೆ ಎದುರಿನ ಶರಾವತಿ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆಗೆ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಿಲನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ರಾಜ ಕಾಲುವೆಯಲ್ಲಿ ನೀರು ಉಕ್ಕಿ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿತ್ತು. ಆದ ಕಾರಣ ಸ್ಥಳೀಯರ ಬೇಡಿಕೆಯಂತೆ ಈ ಪ್ರಮುಖ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೀಘ್ರದಲ್ಲಿ ಪೂರ್ಣಗೊಳ್ಳಬೇಕಿದೆ. ಪಕ್ಕದ ಎಂ.ಜಿ. ರಸ್ತೆಯ ಭಾಗದಲ್ಲಿ ಒಂದು ಬ್ರಿಡ್ಜ್ ನಿರ್ಮಾಣವಾಗಬೇಕಿದ್ದು ಅದಕ್ಕೆ ಎರಡು ಕೋಟಿ ಅನುದಾನವನ್ನು ಸಹ ಮೀಸಲಿಡಲಾಗಿದೆ. ಅದು ಪೂರ್ಣಗೊಂಡರೆ ನೀರು ಸರಾಗವಾಗಿ ಹರಿದು ಹೋಗಿ ಇಲ್ಲಿ ಕೃತಕ ನೆರೆ ಕಡಿಮೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಆದರೆ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳಿಂದಾಗಿ ವಿಳಂಬವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ನಿವಾರಣೆಗಾಗಿ ಪ್ರಯತ್ನ ಮುಂದುವರಿಸಿ ಈ ಭಾಗದ ಜನರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲಾಗುವುದು ಎಂದರು.
ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ಯಶವಂತ ಕುದ್ರೋಳಿ, ಚಂದ್ರಶೇಖರ ಶೆಟ್ಟಿ, ಸಿದ್ಧಾರ್ಥ್, ಜೀವಿತ್, ಮೀರಾ ಶೆಟ್ಟಿ, ಭಾರತಿ ಶೆಟ್ಟಿ, ಜಗನ್ನಾಥ್ ಶೆಟ್ಟಿ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.