ಕನ್ನಡಪ್ರಭ ವಾರ್ತೆ ಕವಿತಾಳ
ಖಾಸಗಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವಮೊರಾರ್ಜಿ ವಸತಿ ಶಾಲೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಶಾಲೆ ಆರಂಭಿಸಲು ಸೂಚಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಯ ಕುರಿತು ಮಾಹಿತಿ ಪಡೆದರು. ಕಾಯಂ ಎಂಬಿಬಿಎಸ್ ವೈದ್ಯರ ನೇಮಕ, ಆಸ್ಪತ್ರೆ ಹತ್ತಿರ ಬಸ್ ನಿಲುಗಡೆಗೆ ಕ್ರಮ ವಹಿಸುವಂತೆ ಸ್ಥಳೀಯರು ಮನವಿ ಮಾಡಿದರು.
ಡಾ.ತಬ್ ಸುಮ್ ಮಾತನಾಡಿ ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ ನೀರಿನ ಸಮಸ್ಯೆ ನೀಗಿಸುವಂತೆ ಶಾಸಕರಿಗೆ ಮನವಿ ಮಾಡಿದರು.ಇಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಶಾಸಕರು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಗೆ ಕೀರ್ತಿ ತರಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ಶಿಕ್ಷಕರಿಗೆ ಸೂಚಿಸಿದರು. ಕಸ್ತೂರಿ ಬಾ ಬಾಲಕಿಯರ ವಸತಿ ನಿಲಯಕ್ಕೆ ಕಾರಿಡಾರ್‌ನಲ್ಲಿ ಗ್ರಿಲ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ,ಮುಖಂಡರು, ಗ್ರಾಮಸ್ಥರು ಇದ್ದರು.