ಶಿಕ್ಷಕರ ದಿನಾಚರಣೆಗೆ ಕ್ಷೇತ್ರದ ಶಾಸಕರು ಗೈರುಹಾಜರಾಗಿದ್ದು ಅವರು ಶಿಕ್ಷಕರಿಗೆ ಅವಮಾನ ಕ್ಷಮೆ ಯಾಚಿಸುವಂತೆ ಬಿಜೆಪಿ ಮುಖಂಡ, ಜಿ. ಪಂ. ಮಾಜಿ ಸದಸ್ಯ ರತ್ನಾಕರ ಹೊನಗೋಡ್ ಆಗ್ರಹಿಸಿದ್ದಾರೆ. ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರಪತಿಯಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ದೇಶದೆಲ್ಲೆಡೆ ಆಚರಿಸುತ್ತಾರೆ. ಆದರೆ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತ್ರ ಶನಿವಾರ ಸಾಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಬಾರದೆ ಶಿಕ್ಷಕ ಸಮೂಹಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಆನಂದಪುರ

ಉತ್ತಮ ಸಮಾಜ ನಿರ್ಮಾಣಕ್ಕೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವಂತಹ ಕಾರ್ಯಕ್ರಮ ಇದಾಗಿದೆ. ಯಾವುದೇ ಕಾರ್ಯಕ್ರಮವಿದ್ದರೂ ಅದನ್ನು ರದ್ದುಪಡಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ, ಕ್ಷೇತ್ರದ ಶಾಸಕರ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸದೆ ಶಿಕ್ಷಕರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.
ನಿವೃತ್ತ ಶಿಕ್ಷಕ ನಾರಾಯಣಪ್ಪ ಮಾತನಾಡಿ, ಶಿಕ್ಷಕರ ಸೇವೆ ಅಮೂಲ್ಯವಾದದು ಇಂತಹ ಸೇವೆಯನ್ನು ಕ್ಷೇತ್ರದ ಶಾಸಕರು ಗುರುತಿಸಿ ಗೌರವಿಸುವಂತಹ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವುದು ಶಿಕ್ಷಕರಿಗೆ ಅಪಮಾನ ಮಾಡಿದಂತೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಶಾಂತಕುಮಾರ್, ಗ್ರಾಮ. ಪಂ. ಮಾಜಿ ಅಧ್ಯಕ್ಷ ಕೆ. ಗುರುರಾಜ್, ನಿವೃತ್ತ ಶಿಕ್ಷಕ ಗಣಪತಿ ಹೆಗಡೆ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.