ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

KannadaprabhaNewsNetwork |  
Published : Jul 21, 2024, 01:17 AM IST
ಗುಜ್ಜರಬೆಟ್ಟು20 | Kannada Prabha

ಸಾರಾಂಶ

ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದೆ

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಕೆಮ್ಮಣ್ಣು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದ್ದು, ತಕ್ಷಣ ತುರ್ತು ಕಾಮಗಾರಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳದಲ್ಲೇ ಮೀನುಗಾರಿಕೆ ಸಚಿವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಯ ಗಂಭೀರತೆ ಬಗ್ಗೆ ಚರ್ಚಿಸಿ ತಕ್ಷಣ ಕಡಲ್ಕೊರೆತ ತಡೆ ಕಾಮಗಾರಿಗೆ 5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು ಹಾಗೂ ಮಂಗಳವಾರ ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಮನವಿ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ಉಡುಪಿ ತಹಸೀಲ್ದಾರ್ ಗುರುರಾಜ್, ಕೆಮ್ಮಣ್ಣು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಸುಮ ರವೀಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಪುರಂದರ, ಪ್ರಶಾಂತ್, ಸ್ಥಳೀಯ ಮುಖಂಡರಾದ ಮುತ್ತ, ಬಂದರು ಇಲಾಖೆಯ ಅಧಿಕಾರಿಗಳು, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ