ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

KannadaprabhaNewsNetwork |  
Published : May 16, 2026, 01:30 AM IST
ಬಜೆ ಅಣೆಕಟ್ಟೆಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು | Kannada Prabha

ಸಾರಾಂಶ

ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಉಡುಪಿ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕಿಂತ ನೀರಿನ ಲಭ್ಯತೆ ಕಡಿಮೆ ಇದ್ದು, ಉಡುಪಿ ನಗರ ಭಾಗಕ್ಕೆ ನಿರಂತರ ನೀರು ಪೂರೈಕೆಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ಘಟಕವನ್ನು ಉತ್ತಮವಾಗಿ ನಿರ್ವಹಿಸಿ ಉಡುಪಿ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಮಾಜಿ ಸದಸ್ಯ ಗಿರೀಶ್ ಅಂಚನ್, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್, ಸಹಾಯಕ ಅಭಿಯಂತರ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಾರ್ಥ ರುದ್ರಯಾಗ ಅರ್ಥಪೂರ್ಣ: ರಾಮಲಿಂಗ ರೆಡ್ಡಿ
ಹಿಜಾಬ್‌ ನಿಷೇಧ ರದ್ದು ನಿರ್ಧಾರ ಸರಿ: ರಾಮಲಿಂಗಾ ರೆಡ್ಡಿ