ಉಡುಪಿ: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳ ಜೊತೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ, ಮಾಹಿತಿ ಪಡೆದರು.
ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲೂ ನಿರಂತರ ನೀರು ಸರಬರಾಜಿಗೆ ಪೂರಕವಾಗಿ ಸಾಕಷ್ಟು ನೀರಿನ ಲಭ್ಯತೆ ಇದೆ ಎಂದರು.
ಈ ಸಂದರ್ಭ ಇತ್ತೀಚೆಗೆ ಉನ್ನತೀಕರಣಗೊಂಡ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ, ಸಂತೋಷ್ ಜತ್ತನ್, ಟಿ.ಜಿ. ಹೆಗ್ಡೆ, ಮಂಜುನಾಥ ಮಣಿಪಾಲ, ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಉಪಸ್ಥಿತರಿದ್ದರು.