ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳ ಭೂಮಿಪೂಜೆ

KannadaprabhaNewsNetwork |  
Published : Apr 28, 2026, 02:45 AM IST
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳ ಭೂಮಿಪೂಜೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಶನಿವಾರ ಭೂಮಿಪೂಜೆ ನೆರವೇರಿಸಿದರು. ನಗರ ಮತಕ್ಷೇತ್ರದ ವ್ಯಾಪ್ತಿಯ ಖಂಡಸಾರಿ ತಾಂಡಾದಲ್ಲಿ 1 ಕೋಟಿ ರೂ. ಅನುದಾನದಲ್ಲಿ ತಾಂಡಾದ ಮುಖ್ಯ ರಸ್ತೆ ಮತ್ತು ಆಂತರಿಕ ಸಿಸಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ 5 ಲಕ್ಷ ರೂ. ಅನುದಾನದಲ್ಲಿ ಸೇವಾಲಾಲ್ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಶನಿವಾರ ಭೂಮಿಪೂಜೆ ನೆರವೇರಿಸಿದರು.

ನಗರ ಮತಕ್ಷೇತ್ರದ ವ್ಯಾಪ್ತಿಯ ಖಂಡಸಾರಿ ತಾಂಡಾದಲ್ಲಿ 1 ಕೋಟಿ ರೂ. ಅನುದಾನದಲ್ಲಿ ತಾಂಡಾದ ಮುಖ್ಯ ರಸ್ತೆ ಮತ್ತು ಆಂತರಿಕ ಸಿಸಿ ರಸ್ತೆ ಅಭಿವೃದ್ಧಿಪಡಿಸುವುದು ಹಾಗೂ 5 ಲಕ್ಷ ರೂ. ಅನುದಾನದಲ್ಲಿ ಸೇವಾಲಾಲ್ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಇದೇ ವೇಳೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ ಅಳವಡಿಸಿದ್ದ ಹೈಮಾಸ್ಟ್ ದೀಪ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಇದಕ್ಕೂ ಮೊದಲು ವಾರ್ಡ್ ನಂ.1ರಲ್ಲಿ ಬರುವ ಶಕ್ತಿನಗರ ರವೀಂದ್ರನಾಥ ಟ್ಯಾಗೋರ್‌ ಶಾಲೆ ಎದುರು ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 2025-26ನೇ ಸಾಲಿನ 25 ಲಕ್ಷ ರೂ. ಅನುದಾನದಲ್ಲಿ ಶಕ್ತಿ ನಗರ ಶಿವಶಿಂಪಿ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೇಪರ ಹಂಚಿದ ಹುಡುಗ 20 ಕೃತಿ ರಚಿಸಿದ ಸಾಹಿತಿ: ಡಾ.ವಿ.ಡಿ.ಐಹೊಳ್ಳಿ
ಬಸವಾದಿ ಶರಣರ ಕಾಯಕ ತತ್ವ ಪಾಲಿಸಿ