ಕಾರ್‌ ಗ್ಯಾರೇಜಗೆ ಶಾಸಕ ಯತ್ನಾಳ ಭೇಟಿ

KannadaprabhaNewsNetwork |  
Published : Feb 09, 2026, 03:15 AM IST
 | Kannada Prabha

ಸಾರಾಂಶ

ವಿಜಯಪುರ: ನಗರದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಹನುಮಂತ ಕನಮಡಿ ಎಂಬುವರ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಇತ್ತೀಚೆಗೆ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೂ.5 ಲಕ್ಷ ನೀಡುವುದಾಗಿ ಘೋಷಿಸಿದರು.

ವಿಜಯಪುರ: ನಗರದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಹನುಮಂತ ಕನಮಡಿ ಎಂಬುವರ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಇತ್ತೀಚೆಗೆ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೂ.5 ಲಕ್ಷ ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅವಘಡ ದಲ್ಲಿ ದುರಸ್ತಿಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಲಾಗಿವೆ. ಸರ್ವಿಸ್‌ ಸೆಂಟರ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಬಿಡಿ ಭಾಗಗಳು ಕೂಡ ಬೆಂಕಿಗಾಹುತಿ ಆಗಿವೆ ಎಂದು ತಿಳಿಸಿದ್ದಾರೆ. ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಮಾನವೀಯತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಹಾರ ನೀಡಬೇಕು. ಈ ಕುರಿತಂತೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೂ ಮಾತನಾಡುವುದಾಗಿ ತಿಳಿಸಿದರು. ಅಗ್ನಿಸೂಕ್ಷ್ಮ ಮಳಿಗೆಗಳಲ್ಲಿ ಮಾಲೀಕರು ಹಾಗೂ ಆಡಳಿತ ಮಂಡಳಿ ಅವಘಡ ಆಗದಂತೆ, ಒಂದು ವೇಳೆ ಆದರೂ ಅಗ್ನಿ ನಂದಿಸಲು ಉಪಕರಣವನ್ನು‌ ಅಳವಡಿಸಿಕೊಂಡಿರಬೇಕು. ಹಾಗೆಯೇ, ವಿಮೆಯಿದ್ದರೆ ಒಳಿತು. ವರ್ಷಕ್ಕೊಮ್ಮೆ ವಿದ್ಯುತ್ ಉಪಕರಣಗಳ ಅಡಿಟ್ ಮಾಡಿ ಎಲ್ಲಿಯೂ ಸೋರಿಕೆ ಆಗದಂತೆ, ಶಾರ್ಟ್ ಸರ್ಕ್ಯೂಟ್ ಆಗದಂತೆ ನೋಡಿಕೊಳ್ಳಬೇಕು. ಸುರಕ್ಷತೆ ಹಾಗೂ ತಡೆಗಟ್ಟುವ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’