ಸರ್ಕಾರಿ ಶಾಲೆಗಳ ಬಲವರ್ಧನೆಗೆ ಶಾಸಕರ ಸಹಕಾರ ಅನನ್ಯ

KannadaprabhaNewsNetwork |  
Published : Jan 06, 2026, 02:15 AM IST
ಸೂಲಿಬೆಲೆ ಬಸ್ಟಾಂಡ್ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರು ವೈಯಕ್ತಿಕವಾಗಿ ನೀಡಿದ ಕೊಡುಗೆಯನ್ನು ಶಾಸಕ ಶರತ್ ಬಚ್ಚೇಗೌಡ ವಿತರಣೆ ಮಾಢಿದರು, ಹಿರಿಯ ಮುಖಂಡ ಗೋಪಾಲಗೌಡ, ನಾರಾಯಣಗೌಡ, ವೆಂಕಟೇಶಪ್ಪ, ಪದ್ಮನಾಭ, ಶ್ರೀನಿವಾಸಪ್ಪ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಶಾಸಕ ಶರತ್ ಬಚ್ಚೇಗೌಡರು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪಣತೊಟ್ಟಿದ್ದಾರೆ ಎಂದು ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ಸೂಲಿಬೆಲೆ: ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಶಾಸಕ ಶರತ್ ಬಚ್ಚೇಗೌಡರು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪಣತೊಟ್ಟಿದ್ದಾರೆ ಎಂದು ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ಬಸ್‌ ನಿಲ್ದಾಣದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ವೈಯಕ್ತಿಕವಾಗಿ ಟ್ರ್ಯಾಕ್ ಸೂಟ್, ಬ್ಯಾಗ್ ಹಾಗೂ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ಶಾಸಕರು ಕ್ಷೇತ್ರದಲ್ಲಿ ಹಗಲಿರುಳು ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅಲ್ಲದೇ ಸರ್ಕಾರಿ ಶಾಲೆಗಳ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದು ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಹೆಚ್ಚಿನ ಕೆಲಸ ಮಾಡಿಸಲಾಗುತ್ತಿದೆ ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಪ್ರಸಕ್ತ ಸಾಲಿನ ೧೦ನೇ ತರಗತಿ ಮಕ್ಕಳಿಗೆ ವಿಶೇಷ ಪ್ರಶ್ನೆ ಪತ್ರಿಕೆ ತಯಾರು ಮಾಡಿದ್ದು, ಹೊಸಕೋಟೆ ತಾಲೂಕಿನಲ್ಲಿ ಉತ್ತಮ ಫಲಿತಾಂಶಕ್ಕಾಗಿ ಹೆಚ್ಚು ಕಾಳಜಿ ವಹಿಸಲು ಇಲಾಖೆಗೆ ಸೂಚಿಸಲಾಗಿದೆ. ಮಕ್ಕಳಿಗೆ ಶೈಕ್ಷಣಿಕ ಕಾರ್ಯಾಗಾರಗಳಿಮಂದ ಮನೋಧೈರ್ಯ ತುಂಬಬೇಕು ಎಂದು ಹೇಳಿದರು.

ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಮಾತನಾಡಿ, ಸರ್ಕಾರಿ ಶಾಲಾ ಆವರಣಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ಶಾಸಕ ಶರತ್ ಬಚ್ಚೇಗೌಡರು ಹಾಗೂ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹೆಸರು ಸೇರಿದಂತೆ ಹೊಸಕೋಟೆ ತಾಲೂಕಿನಲ್ಲಿ ೧೦ಕ್ಕೂ ಹೆಚ್ಚು ರಂಗ ಮಂದಿರಗಳನ್ನು ವೈಯಕ್ತಿಕ ಅನುದಾನದಲ್ಲಿ ನಿರ್ಮಿಸಿಕೊಡಲಾಗಿದೆ ಹಾಗೂ ಸೂಲಿಬೆಲೆ ಕಾಲೇಜಿಗೆ ಯುವ ಮುಖಂಡರಾದ ಜಿ.ನಾರಾಯಣಗೌಡರು ವೈಯಕ್ತಿಕವಾಗಿ ಕಳೆದ ೨ ವರ್ಷಗಳಿಂದ ಸಮವಸ್ತ್ರ ನೀಡುತ್ತಿರುವುದು ಮತ್ತು ಖಾಸಗಿ ಕಂಪನಿಯ ಸಹಕಾರದಲ್ಲಿ ಕ್ರೀಡಾವಸ್ತ್ರ ಮತ್ತು ಕಂಪ್ಯೂಟರ್‌ಗಳನ್ನು ಕೊಡಿಸಿರುವುದು ಶಾಲಾ ಅಭಿವೃದ್ಧಿಗೆ ಉತ್ತಮ ಸಹಕಾರ. ಶಾಲೆಯ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಯುವ ಮುಖಂಡ ಜಿ.ನಾರಾಯಣಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶಪ್ಪ, ಸಿಆರ್‌ಪಿ ಮಂಜುನಾಥ್, ನಿವೃತ್ತ ಶಿಕ್ಷಕ ಬಿ.ಶ್ರೀನಿವಾಸ್, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ, ಮುಖ್ಯಶಿಕ್ಷಕಿ ಸೌಮ್ಯ, ಶಿಕ್ಷಕರ ಸಂಘದ ಅಧ್ಯಕ್ಷ ಮುನಿಶಾಮಯ್ಯ, ಹಳೇ ವಿದ್ಯಾರ್ಥಿಗಳ ಸಂಘ ಕಾರ್ಯದರ್ಶಿ ಎಂ.ಪ್ರಶಾಂತ್‌, ಸಂಘದ ಪದಾಧಿಕಾರಿಗಳು ಇದ್ದರು.

(ಫೋಟೋ ಕ್ಯಾಫ್ಷನ್‌)

ಸೂಲಿಬೆಲೆ ಬಸ್‌ ನಿಲ್ದಾಣದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡರು ನೀಡಿದ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಬ್ಯಾಗ ನೋಟ್‌ಬುಕ್‌ ಕೊಡುಗೆಯನ್ನು ಶಾಸಕ ಶರತ್ ಬಚ್ಚೇಗೌಡ ವಿತರಿಸಿದರು, ಹಿರಿಯ ಮುಖಂಡ ಗೋಪಾಲಗೌಡ, ನಾರಾಯಣಗೌಡ, ವೆಂಕಟೇಶಪ್ಪ, ಪದ್ಮನಾಭ, ಶ್ರೀನಿವಾಸಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ