-ವಿದ್ಯುತ್ ಸಮಸ್ಯೆಗಳ ಕುರಿತು ಜೆಸ್ಕಾಂ ಎಂಡಿ ಜೊತೆ ಶಾಸಕರ ಚರ್ಚೆ

KannadaprabhaNewsNetwork |  
Published : Oct 06, 2026, 01:15 AM IST
ಚಿತ್ರ 5ಬಿಡಿಆರ್59 | Kannada Prabha

ಸಾರಾಂಶ

ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳ ಕೊರತೆ ಸೇರಿದಂತೆ ಸಾರ್ವಜನಿಕರು ಮತ್ತು ರೈತರು ಎದುರಿಸುತ್ತಿರುವ ಹಲವು ವಿದ್ಯುತ್ ಸಮಸ್ಯೆಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸೋಮವಾರ ಕಲಬುರಗಿಯ ಜೆಸ್ಕಾಂ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ್ ಕುರೇರಾ ಅವರನ್ನು ಭೇಟಿ ಮಾಡಿ ಸಮಗ್ರವಾಗಿ ಚರ್ಚಿಸಿದರು.

ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳ ಕೊರತೆ ಸೇರಿದಂತೆ ಸಾರ್ವಜನಿಕರು ಮತ್ತು ರೈತರು ಎದುರಿಸುತ್ತಿರುವ ಹಲವು ವಿದ್ಯುತ್ ಸಮಸ್ಯೆಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸೋಮವಾರ ಕಲಬುರಗಿಯ ಜೆಸ್ಕಾಂ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ್ ಕುರೇರಾ ಅವರನ್ನು ಭೇಟಿ ಮಾಡಿ ಸಮಗ್ರವಾಗಿ ಚರ್ಚಿಸಿದರು.

ಕ್ಷೇತ್ರದಲ್ಲಿ 63 ಕೆ.ವಿ.ಎ ಹಾಗೂ 100 ಕೆ.ವಿ.ಎ ಸಾಮರ್ಥ್ಯದ ವಿದ್ಯುತ್ ಪರಿವರ್ತಕಗಳು ಅಗತ್ಯ ಪ್ರಮಾಣದಲ್ಲಿ ಲಭ್ಯವಿರದ ಹಿನ್ನೆಲೆಯಲ್ಲಿ, ಹೊಸ ಪರಿವರ್ತಕಗಳ ಅಳವಡಿಕೆ ಹಾಗೂ ಹಾಳಾಗಿರುವ ಪರಿವರ್ತಕಗಳ ಬದಲಾವಣೆಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಹಲವು ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಮಸ್ಯೆ ಎದುರಿಸುತ್ತಿರುವುದನ್ನು ಶಾಸಕರು ಅಧಿಕಾರಿಗಳ ಗಮನಕ್ಕೆ ತಂದರು.

ಕ್ಷೇತ್ರದ ವಿವಿಧ ಗ್ರಾಮಗಳಿಂದ ವಿದ್ಯುತ್ ಸಮಸ್ಯೆಗಳ ಕುರಿತು ಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಜನರು ಹಾಗೂ ರೈತರಿಗೆ ತೊಂದರೆಯಾಗದಂತೆ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಕಲ್ಪಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಮನವಿ ಮಾಡಿದರು.

ಕ್ಷೇತ್ರದ ವಿದ್ಯುತ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವುದು, ಪರಿವರ್ತಕಗಳ ಲಭ್ಯತೆ ಹೆಚ್ಚಿಸುವುದು ಹಾಗೂ ಬಾಕಿ ಇರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಇದ್ದರು.

--

ಚಿತ್ರ 5ಬಿಡಿಆರ್59

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಗಳ ಕುರಿತು ಜೆಸ್ಕಾಂ ಎಂಡಿ ಜೊತೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚರ್ಚೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜ ಸೇವೆ ಪ್ರತಿಯೊಬ್ಬರ ಜವಾಬ್ದಾರಿಯಾಗಲಿ
ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ: ವಿನೋದಕುಮಾರ