ಶಾಸಕರೇ ಮೊದಲು ನಿಮ್ಮ ಸೋಲನ್ನು ಒಪ್ಪಿಕೊಳ್ಳಿ: ಗೀತಾ ವಾಗ್ಳೆ

KannadaprabhaNewsNetwork |  
Published : Jul 17, 2025, 12:30 AM IST
ಗೀತಾ | Kannada Prabha

ಸಾರಾಂಶ

ಕಾರ್ಕಳದಲ್ಲಿ ಸ್ಥಾಪಿಸಿರುವ ಪರಶುರಾಮನ ಪ್ರತಿಮೆಯ ಕಾಲುಗಳು ಫೈಬರ್‌ನಿಂದ ಮಾಡಲಾಗಿದೆ ಎಂದು ಹೇಳಿದ್ದ ಕಾಂಗ್ರೆಸ್‌ಗೆ ಸೋಲಾಗಿದೆ ಎಂದು ಲೇವಡಿ ಮಾಡಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ಬಗ್ಗೆ ಅನುಕಂಪ ಮೂಡುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕಾರ್ಕಳದಲ್ಲಿ ಸ್ಥಾಪಿಸಿರುವ ಪರಶುರಾಮನ ಪ್ರತಿಮೆಯ ಕಾಲುಗಳು ಫೈಬರ್‌ನಿಂದ ಮಾಡಲಾಗಿದೆ ಎಂದು ಹೇಳಿದ್ದ ಕಾಂಗ್ರೆಸ್‌ಗೆ ಸೋಲಾಗಿದೆ ಎಂದು ಲೇವಡಿ ಮಾಡಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ಬಗ್ಗೆ ಅನುಕಂಪ ಮೂಡುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಹೇಳಿದ್ದಾರೆ.ಶಾಸಕರೇ, ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳುವ ಮೊದಲೊಮ್ಮೆ ನ್ಯಾಯಾಲಯದ ಇನ್ನೊಂದು ತೀರ್ಪನ್ನು ನಿಮಗೆ ನೆನಪಿಸುತ್ತಿದ್ದೇವೆ. ಪರಶುರಾಮನನ್ನು ಕಾರ್ಕಳದ ಉಮಿಕಲ್ ಗುಡ್ಡದ ಮೇಲೆ ಪ್ರತಿಷ್ಠಾಪಿಸಿದಾಗ ನೀವು ಹೇಳಿದ್ದೇನು? ಈ ಮೂರ್ತಿಯನ್ನು ಪೂರ್ತಿಯಾಗಿ ಕಂಚಿನಿಂದ ತಯಾರಿಸಲಾಗಿದೆ ಎಂದಿದ್ದೀರಿ ತಾನೇ? ನಿಮ್ಮ ಹಿಂಬಾಲಕರೂ ಇದನ್ನೇ ಹೇಳಿಕೊಂಡು ತಿರುಗಿದ್ದರಲ್ಲವೇ? ಈಗ ಕೋರ್ಟ್ ಹೇಳಿರುವುದೇನು? ಈ ಪ್ರತಿಮೆ ಕಂಚಿನದ್ದಲ್ಲ ಎಂದಲ್ಲವೇ? ಕೋರ್ಟ್ ಇದನ್ನು ಸ್ಪಷ್ಟವಾಗಿ ಹೇಳಿದ್ದರೂ ನಿಮಗಾದ ಸೋಲನ್ನು ಮುಚ್ಚಿಟ್ಟುಕೊಂಡು ನೀವು ಕಾಂಗ್ರೆಸ್ ಪಕ್ಷದ ನಾಯಕರನ್ನು ಲೇವಡಿ ಮಾಡಿರುವುದು ಎಷ್ಟು ಸರಿ? ಈಗ ಕಾಂಗ್ರೆಸ್ ಗೆದ್ದಿದೆ. ಸೋತಿದ್ದು ನೀವು ಎನ್ನುವುದನ್ನು ಒಪ್ಪಿಕೊಳ್ಳಿ ಎಂದು ಗೀತಾ ವಾಗ್ಳೆ ಅವರು ಹೇಳಿದ್ದಾರೆ.ಸುನಿಲ್ ಕುಮಾರ್ ಅವರೇ, ಕಾಂಗ್ರೆಸ್ ಪಕ್ಷದವರು ಪರಶುರಾಮ ಮೂರ್ತಿಯ ನಿರ್ಮಾಣದ ಬಗ್ಗೆ ಸಂಶಯ ವ್ಯಕ್ತಪಡಿಸಿರದಿದ್ದರೆ ನೀವು ಮಾಡಿದ ಭ್ರಷ್ಟಾಚಾರದ ವಾಸನೆಯೂ ನಮ್ಮ ಮುಗ್ಧ ಮತದಾರರ ಹತ್ತಿರ ಸುಳಿಯುತ್ತಿರಲಿಲ್ಲ. ಈಗ ನಿಮ್ಮೊಳಗಿನ ಇನ್ನೊಂದು ಕರಾಳ ಮುಖ ಎಲ್ಲ ಮತದಾರರಿಗೂ ತಿಳಿದಿದೆ.ಸುನಿಲ್ ಕುಮಾರ್ ಅವರೇ, ನೀವು ಹೇಳಿದ್ದು ಸುಳ್ಳು, ನೀವು ಮಾಡಿದ್ದು ಮೋಸ ಎಂಬುದು ಜಗಜ್ಜಾಹೀರಾಗಿದೆ. ಹೀಗಿರುವಾಗ ವೃಥಾ ಈ ಹೇಳಿಕೆ ಕೊಡಬೇಕಾದ ಅಗತ್ಯವೇನಿದೆ? ಅವಮಾನದಿಂದ ವಿಚಲಿತರಾಗಿರುವ ನೀವು ಹತಾಶರಾಗಿ ಈ ಹೇಳಿಕೆ ನೀಡಿದ್ದೀರಿ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.ಜನರ ಧಾರ್ಮಿಕ ಭಾವನೆಗಳ ಜೊತೆಗೆ ಚೆಲ್ಲಾಟವಾಡಿದ ನೀವು ಇದೇ ಜನರಲ್ಲಿ ಕ್ಷಮೆ ಕೇಳಬೇಕು. ದಿನಬೆಳಗಾದರೆ ಧಾರ್ಮಿಕತೆಯ ಬಗ್ಗೆ ಭಾಷಣ ಮಾಡುವ ನೀವು ಈಗ ಈ ರೀತಿ ಜನರನ್ನು ವಂಚಿಸಿದ್ದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ನಿಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳಿ ಎಂಬುದಾಗಿ ಗೀತಾ ವಾಗ್ಳೆ ಹೇಳಿದ್ದಾರೆ.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ