ಕನ್ನಡಪ್ರಭ ವಾರ್ತೆ ಮಸ್ಕಿ
ಪಟ್ಟಣದ 17 ಹಾಗೂ 18ನೇ ವಾರ್ಡಿನಲ್ಲಿ ಬೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾರ್ವಜನಿಕರು ಇಲ್ಲಿನ ಬಡಾವಣೆಯಲ್ಲಿ ಮಳೆ ಬಂದರೆ ಚರಂಡಿಯಿಂದ ನೀರು ಹೊರಗಡೆ ಬಂದು ರಸ್ತೆ ಮೇಲೆಯೇ ನಿಲ್ಲುತ್ತದೆ ಇದರಿಂದ ಓಡಾಡಲು ತೊಂದರೆಯಾಗುತ್ತದೆ ಆದ್ದರಿಂದ ಸೂಕ್ತ ಚರಂಡಿ ವ್ಯವಸ್ಥೆ ಹಾಗೂ ಸಿಸಿ ರಸ್ತೆಯನ್ನು ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪಟ್ಟಣದ ಯಾವ ಯಾವ ವಾರ್ಡುಗಳಲ್ಲಿ ಏನೆಲ್ಲಾ ಸಮಸ್ಯೆ ಇದೆಯೋ ಎನ್ನುವುದನ್ನು ಪಟ್ಟಿ ಸಿದ್ಧಪಡಿಸಿ ಮುಂಬರುವ ದಿನಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಬೇಕಾದ ಅನುದಾನ ಒದಗಿಸಿ ಇಲ್ಲಿನ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ನರಸ ರೆಡ್ಡಿ ಅವರಿಗೆ ಸೂಚನೆ ನೀಡಿದರು. ಅಲ್ಲದೆ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ವಿದ್ಯುತ್ ದೀಪ ಹಾಗೂ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಎಂದು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ನರಸರೆಡ್ಡಿ, ಮಸ್ಕಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬ್ ಸಾಬ್ ಮುದ್ದಾಪುರ್, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.